ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಕೋವಿಡ್-19 ಹಿನ್ನೆಲೆಯಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ. ಭೂಬಾಲನ್ ಅವರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುಗರಿ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಉಪವಿಭಾಗಾಧಿಕಾರಿ ಎಂ. ಗಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೇಟಿ ಬಚಾವೋ ಬೇಟಿ ಪಡಾವೋ ಸ್ಟಿಕರ್ ಬಿಡುಗಡೆ:
ಬಾಗಲಕೋಟೆ ಜಿಲ್ಲಾಡಳಿತದಿಂದ ಗಾಂಧಿಜೀ, ಶಾಸ್ತ್ರೀ ಜಯಂತಿ ಸರಳ ಆಚರಣೆ... ಕೇಂದ್ರ ಪುರಸ್ಕೃತ ಯೋಜನೆಯಾದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಪ್ರಚಾರದ ಸ್ಟಿಕ್ಕರ್ಗಳನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಕಾರ್ಯಕ್ರಮದ ವೇಳೆ ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ 2018-19ರಲ್ಲಿ 4 ಜಿಲ್ಲೆಗಳ ಪೈಕಿ ಬಾಗಲಕೋಟೆ ಜಿಲ್ಲೆಯೂ ಒಂದಾಗಿದೆ. ಈ ಯೋಜನೆಯ ಮುಖ್ಯ ಉದ್ದೇಶ ಹೆಣ್ಣು ಮಕ್ಕಳ ಸಂರಕ್ಷಣೆ ಮತ್ತು ಪೋಷಣೆ ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಾಗಿದೆ.
ಲಿಂಗ ಪಕ್ಷಪಾತ ಮತ್ತು ಲಿಂಗ ಆಯ್ಕೆ ಮಾಡುವುದನ್ನು ತಡೆಗಟ್ಟುವುದು, ಹೆಣ್ಣು ಮಕ್ಕಳ ಉಳಿವು ಮತ್ತು ಅವರ ರಕ್ಷಣೆಯನ್ನು ಖಾತ್ರಿಗೊಳಿಸಿವುದು ಹಾಗೂ ಉತ್ತಮ ಶಿಕ್ಷಣ ನೀಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.
ಸ್ಟಿಕ್ಕರ್ ಬಿಡುಗಡೆ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿ.ಸಿ. ಶಿವಲಿಂಗಪ್ಪ, ಐ.ಸಿ. ಡಿಸಿಯ ಅಧೀಕ್ಷಕಿ ಜಯಮಾಲಾ ದೊಡ್ಡಮನಿ ಸೇರಿದಂತೆ ಇತರರು ಇದ್ದರು.