ಬಾಗಲಕೋಟೆ:ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನವೀದ ಹಸನಸಾಬ ಥರಥರಿ ಎಂಬ ವಿದ್ಯಾರ್ಥಿ ಫೆಬ್ರುವರಿ 18ರಂದು ಕಾಲೇಜಿಗೆ ಟೋಪಿ (ತಕಿಯಾ) ಧರಿಸಿಕೊಂಡು ಬಂದಿದ್ದ. ಹೀಗಾಗಿ ಕಾಲೇಜಿನ ಪ್ರಾಚಾರ್ಯ ಎ.ಎಸ್. ಪೂಜಾರ ಅವರು ವಿದ್ಯಾರ್ಥಿ ಮೇಲೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ನವೀದ್ ಥರಥರಿ ನ್ಯಾಯಾಯಲದ ಮೇಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಪಿಎಸ್‌ಐ, ಪ್ರಾಚಾರ್ಯ ಸೇರಿ ಏಳು ಜನ ಪೊಲೀಸ್ ಸಿಬ್ಬಂದಿ ವಿರುದ್ಧ ದೂರು ದಾಖಲು ಮಾಡುವಂತೆ ಆದೇಶಿಸಿದೆ.
ಠಾಣಾಧಿಕಾರಿ ರಾಜು ಬೀಳಗಿ, ಕಾಲೇಜಿನ ಪ್ರಾಚಾರ್ಯ ಎ. ಎಸ್. ಪೂಜಾರ ಸೇರಿದಂತೆ ಏಳು ಪೊಲೀಸ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಬನಹಟ್ಟಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ 2022ರ ಮಾರ್ಚ್ 29ರಂದು ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಏಪ್ರಿಲ್ 4ರಂದು ಪ್ರಕರಣ ದಾಖಲಿಸಿಕೊಳ್ಳುವಂತೆ ಆದೇಶ ಹೊರಡಿಸಿದ ಹಿನ್ನೆಲೆ ಸ್ಥಳೀಯ ಠಾಣೆ ಹೆಚ್ಚುವರಿ ಪಿಎಸ್‌ಐ ಸಾಂಬಾಜಿ ಸೂರ್ಯವಂಶಿ ಮೇ 24ರಂದು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.