ಕರ್ನಾಟಕ

karnataka

ETV Bharat / state

ವಸತಿ ನಿಲಯದಿಂದ ಹಾರಿ ಆತ್ಮಹತ್ಯೆ: ವಿದ್ಯಾರ್ಥಿನಿ ಸಾವು - Bagalkote

ಶಾಸಕ ಆನಂದ ನ್ಯಾಮಗೌಡ ಒಡೆತನದ ರಾಯಲ್ ಪ್ಯಾಲೇಸ್​​ ಕಾಲೇಜ್​ನಲ್ಲಿ ದ್ವೀತಿಯ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಿಯಾಂಕಾ ಮೇತ್ರಿ(17), ಕಾಲೇಜಿನ ವಸತಿ‌ ನಿಲಯದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

ಪ್ರಿಯಾಂಕಾ ಮೇತ್ರಿ

By

Published : Jul 10, 2019, 9:55 PM IST

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಪಟ್ಟಣದ ರಾಯಲ್ ಪ್ಯಾಲೇಸ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿ ಪ್ರಿಯಾಂಕಾ ಮೇತ್ರಿ(17, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ಪ್ರಿಯಾಂಕಾ ಮೇತ್ರಿ ಮೃತದೇಹ

ರಾಯಲ್ ಪ್ಯಾಲೇಸ್​​ ಕಾಲೇಜ್​ನಲ್ಲಿ ದ್ವೀತಿಯ ಪಿಯು ವಿದ್ಯಾಭ್ಯಾಸ ಮಾಡುತ್ತಿದ್ದು, ಕಾಲೇಜಿನ ವಸತಿ‌ ನಿಲಯದಲ್ಲಿ ವಾಸಿಸುತ್ತಿದ್ದಳು. ನಿನ್ನೆ ತಡರಾತ್ರಿ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ. ಇದಲ್ಲದೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

For All Latest Updates

TAGGED:

Bagalkote

ABOUT THE AUTHOR

...view details