ಬಾಗಲಕೋಟೆ :ಸಾವಳಗಿ ಪಟ್ಟಣವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.
ಸಾವಳಗಿ ಗ್ರಾಮವನ್ನು ತಾಲೂಕು ಮಾಡಬೇಕು ಎಂದು ಆಗ್ರಹಿಸಿ ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೂ ಸಹ ತಾಲೂಕು ಎಂದು ಘೋಷಣೆ ಮಾಡಿಲ್ಲ. ಕಳೆದ ಬಾರಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡಿರುವುದರಿಂದ ಈಗ ಮತ್ತೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಸೂಚಿಸಿದೆ. ಈಗಲೂ ಚುನಾವಣೆ ಬಹಿಷ್ಕಾರ ಮಾಡಿ, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ.