ಬಾಗಲಕೋಟೆ:ಜಿಲ್ಲೆಯಲ್ಲಿ ಯಾವುದೇ ಅಧಿಕಾರಿಯ ವಿರುದ್ಧ ದೂರು ಬಂದಿಲ್ಲ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯ ತೃಪ್ತಿಕರವಾಗಿದೆ ಎಂದು ಉಪ ಲೋಕಾಯುಕ್ತ ಅಧಿಕಾರಿ ಬಿ.ಎಸ್.ಪಾಟೀಲ ಹೇಳಿದರು.
ಬಾಗಲಕೋಟೆ ಡಿಸಿ, ಎಸ್ಪಿ ಕಾರ್ಯ ತೃಪ್ತಿಕರವಾಗಿದೆ: ಉಪ ಲೋಕಾಯುಕ್ತ ಬಿ.ಎಸ್.ಪಾಟೀಲ
ಜಿಲ್ಲೆಯಲ್ಲಿ 273 ಸಣ್ಣ ಪುಟ್ಟ ಹಾಗೂ ದೊಡ್ಡ ಪ್ರಮಾಣದ ಕೆರೆಗಳು ಇದ್ದು, ಅವುಗಳಿಗೆ ಕಾಯಕಲ್ಪ ನೀಡಿ ನೀರು ಸಂಗ್ರಹ ಮಾಡುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯ ತೃಪ್ತಿಕರವಾಗಿದೆ ಎಂದರು.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಊಟ ಹಾಗೂ ಔಷಧೋಪಚಾರ ನೀಡುವ ಬಗ್ಗೆ ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಯಲು ಶೌಚಾಲಯ ಕಡಿವಾಣ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 273 ಸಣ್ಣ ಪುಟ್ಟ ಹಾಗೂ ದೊಡ್ಡ ಪ್ರಮಾಣದ ಕೆರೆಗಳು ಇದ್ದು, ಅವುಗಳಿಗೆ ಕಾಯಕಲ್ಪ ನೀಡಿ ನೀರು ಸಂಗ್ರಹ ಮಾಡುವಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯ ತೃಪ್ತಿಕರವಾಗಿದೆ ಎಂದರು.