ಬಾಗಲಕೋಟೆ: ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿದ ಪರಿಣಾಮ ಜಮಖಂಡಿ ಪಟ್ಟಣದ ಹುಲ್ಯಾಳಕರ್ ಗಲ್ಲಿಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಇದರಿಂದ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಮನೆ ಕುಸಿದು ವ್ಯಕ್ತಿಗೆ ಗಾಯ: ತಪ್ಪಿದ ಭಾರೀ ಅನಾಹುತ
ಜಮಖಂಡಿ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ ಸಾಕಷ್ಟು ಮಳೆ ಆಗಿದ್ದರಿಂದ ಮಣ್ಣಿನಿಂದ ನಿರ್ಮಾಣ ಆಗಿರುವ ಹಳೇ ಮನೆ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾನೆ.
ಪವನ್ ಸವದತ್ತಿ (37) ಎಂಬ ವ್ಯಕ್ತಿ ಕುಸಿದ ಮನೆಯ ಒಳಗೆ ಸಿಕ್ಕು ಗಾಯಗೊಂಡಿದ್ದಾನೆ. ಜಮಖಂಡಿ ಪಟ್ಟಣದಲ್ಲಿ ಕಳೆದ ಎರಡು ದಿನಗಳಿಂದ ಸಾಕಷ್ಟು ಮಳೆ ಆಗಿದ್ದರಿಂದ ಮಣ್ಣಿನಿಂದ ನಿರ್ಮಾಣ ಆಗಿರುವ ಹಳೇ ಮನೆ ಕುಸಿದು ಬಿದ್ದಿದೆ. ಮಧ್ಯಾಹ್ನ ಊಟ ಮಾಡುವ ಸಮಯದಲ್ಲಿ ಮಣ್ಣು ಕುಸಿದು ಬಿದ್ದಿದೆ.
ಮೊದಲು ಸ್ಥಳೀಯರು ಅಪಾಯದಿಂದ ಪಾರು ಮಾಡಲು ಪ್ರಯತ್ನ ಪಟ್ಟಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ಹೂರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಮನೆಯಲ್ಲಿ ಒಬ್ಬರೇ ಇದ್ದು, ಉಳಿದವರು ಊರಿಗೆ ಹೋದ ಪರಿಣಾಮ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.