ಬಾಗಲಕೋಟೆ:ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕೆಲ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಆಗುತ್ತಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಾಗಿ ಇರುತ್ತೇನೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸ್ಪಷ್ಟ ಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಆನಂದ ನ್ಯಾಮಗೌಡ ಸ್ಪಷ್ಟನೆ
ನಮ್ಮ ತಂದೆಯವರಾದ ಸಿದ್ದು ನ್ಯಾಮಗೌಡರು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡಿದ್ದಾರೆ. ಅವರ ಹೆಸರಿಗೆ ಹಾಗೂ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕಳಂಕ ತರದೇ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಎಂದು ಆನಂದ್ ನ್ಯಾಮಗೌಡ ಸ್ಪಷ್ಟಪಡಿಸಿದ್ದಾರೆ.
ಜಮಖಂಡಿ ಪಟ್ಟಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಪ್ರಸಂಗವೇ ಇಲ್ಲ. ನಾನು ಜಮಖಂಡಿ ಮತ ಕ್ಷೇತ್ರದಲ್ಲಿಯೇ ಇದ್ದು, ಸ್ವಚ್ಛ ಜಮಖಂಡಿ ಕಾರ್ಯಕ್ರಮ ಹಿನ್ನೆಲೆ ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ಇತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾ ಇಲ್ಲಿಯೇ ಇದ್ದೇನೆ ಎಂದು ತಿಳಿಸಿದರು.
ನಮ್ಮ ತಂದೆಯವರಾದ ಸಿದ್ದು ನ್ಯಾಮಗೌಡರು, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡಿದ್ದಾರೆ. ಅವರ ಹೆಸರಿಗೆ ಹಾಗೂ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕಳಂಕ ತರದೇ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದು, ಕೆಲಸ ಕಾರ್ಯ ಮಾಡುತ್ತೇನೆ ಎಂದು ತಿಳಿಸಿದರು.