ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಅಲ್ಲದೇ ಓರ್ವ ಯುವತಿ ಸೋಂಕಿನಿಂದ ಗುಣಮುಖರಾಗಿದ್ದು, ಶುಕ್ರವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೋವಿಡ್‍ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಇಲಕಲ್ ನಗರದ 18 ವರ್ಷದ ಯುವತಿ ರೋಗಿ-5759 ಕೋವಿಡ್‍ನಿಂದ ಗುಣಮುಖರಾದವರು. ಕೋವಿಡ್‍ನಿಂದ ಗುಣಮುಖರಾಗಿದ್ದ ಯುವತಿ ಮಹಾರಾಷ್ಟ್ರದಿಂದ ಬಂದಿದ್ದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪ್ರಕಾಶ ಬಿರಾದಾರ ಯುವತಿಗೆ ಪ್ರಮಾಣ ಪತ್ರ ನೀಡಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೈಗೆ ಸೀಲ್ ಹಾಕಿ ಚಪ್ಪಾಳೆ ತಟ್ಟುವ ಮೂಲಕ ಬೀಳ್ಕೊಟ್ಟರು.