ಕರ್ನಾಟಕ

karnataka

ETV Bharat / state

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರುಗಳಲ್ಲಿ ನಿಲ್ಲದ ಕೊರೊನಾ ಕಾಟ: ಇಂತಿದೆ ವರದಿ

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ ಅಂಕಿ-ಅಂಶಗಳ ಸಂಪೂರ್ಣ ವರದಿ ಇಲ್ಲಿದೆ.

Today Corona Report on Koppal Bagalkot Vijayapura Chitradurga Raichur District
ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

By

Published : Oct 17, 2020, 9:28 PM IST

ಕೊಪ್ಪಳ:ಜಿಲ್ಲೆಯಲ್ಲಿ ಇಂದು 87 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 12,850ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

ಗಂಗಾವತಿ 33, ಕೊಪ್ಪಳ 27, ಕುಷ್ಟಗಿ 10 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಪ್ರಕರಣ ಸೇರಿ ಇಂದು ಒಟ್ಟು 87 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಒಟ್ಟು 270 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇಂದು 143 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 11,871 ಜನರು ಗುಣಮುಖರಾಗಿದ್ದಾರೆ. 585 ಜನ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡಲಾಗಿದೆ. ಇನ್ನುಳಿದ ಪ್ರಕರಣಗಳಿಗೆ ನಿಗದಿತ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.

ಬಾಗಲಕೋಟೆ:

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

ಜಿಲ್ಲೆಯಲ್ಲಿ 143 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 152 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಶನಿವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,385 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಒಟ್ಟು 11,391 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ 40, ಹುನಗುಂದ 60, ಮುಧೋಳ 24, ಜಮಖಂಡಿ 28 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 1,288 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,35,081 ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,20,897 ನೆಗಟಿವ್ ಪ್ರಕರಣ, 12,385 ಪಾಸಿಟಿವ್ ಪ್ರಕರಣ ಹಾಗೂ 125 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 866 ಮಾತ್ರ ಸಕ್ರಿಯ ಪ್ರಕರಣಗಳು ಇವೆ.

ವಿಜಯಪುರ:

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

ಜಿಲ್ಲೆಯಲ್ಲಿ ಇಂದು 69 ಹೊಸದಾಗಿ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಇಲ್ಲಿವರೆಗೆ 11,542 ಜನರಿಗೆ ಸೋಂಕು ತಗುಲಿದೆ. ಇಂದು ಕೊರೊನಾದಿಂದ 177 ಜನ ಗುಣಮುಖ ರಾಗಿ ವಿವಿಧ ಆಸ್ಪತ್ರೆ ಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೆ ಕೊರೊನಾ ದಿಂದ ಗುಣಮುಖರಾ‌ದವರ ಸಂಖ್ಯೆ 10,697 ಕ್ಕೆ ಏರಿಕೆಯಾಗಿದೆ. ನಾನಾ ಕಾಯಿಲೆ, ಕೊರೊನಾ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇವುಗಳ ಸಂಖ್ಯೆ 184 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ:

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

ಜಿಲ್ಲೆಯಲ್ಲಿ ಇಂದು 80 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,033 ಕ್ಕೆ ಏರಿಕೆಯಾದಂತಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 49 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 590 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 80 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 11,033 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 49 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ.

ರಾಯಚೂರು:

ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿತ್ರದುರ್ಗ, ರಾಯಚೂರು ಜಿಲ್ಲೆಯ ಇಂದಿನ ಕೊರೊನಾ ವರದಿ..

ಜಿಲ್ಲೆಯಲ್ಲಿ ಇಂದು 55 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,832ಕ್ಕೆ ತಲುಪಿದೆ.

ರಾಯಚೂರು 29, ಮಾನವಿ 8, ಲಿಂಗಸೂಗೂರು 4, ಸಿಂಧನೂರು 7, ದೇವದುರ್ಗ 7 ಪ್ರಕರಣಗಳು ಇಂದು ಪತ್ತೆಯಾಗಿವೆ. ಈವರಗೆ ಪತ್ತೆಯಾಗಿರುವ ಸೋಂಕಿತರಲ್ಲಿ 12,070 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 617 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಡುವ ಮೂಲಕ ಮೃತರ ಸಂಖ್ಯೆ 145ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details