ಕರ್ನಾಟಕ

karnataka

ETV Bharat / state

ಬಾಗಲಕೋಟೆಯಲ್ಲಿ 51 ಮಂದಿಗೆ ಕೊರೊನಾ ದೃಢ - Today's corona statistics

ಬಾಗಲಕೋಟೆ ಜಿಲ್ಲೆಯ ಇಂದಿನ ಕೊರೊನಾ ಅಂಕಿ-ಅಂಶ ಹೀಗಿದೆ...

Today's Corona statistics for Bagalakote district
ಕೊರೊನಾ ಪ್ರಕರಣ

By

Published : Oct 26, 2020, 9:31 PM IST

ಬಾಗಲಕೋಟೆ:ಜಿಲ್ಲೆಯಲ್ಲಿ 72 ಜನ ಕೋವಿಡ್​ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಹೊಸದಾಗಿ 51 ಕೊರೊನಾ ಪ್ರಕರಣಗಳು ಹಾಗೂ ಒಂದು ಮೃತ ಪ್ರಕರಣ ಸೋಮವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,983 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 12,524 ಜನ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 15, ಬಾದಾಮಿ 5, ಬೀಳಗಿ 2, ಜಮಖಂಡಿ 10, ಹುನಗುಂದ 9, ಮುಧೋಳ 10 ಜನರಲ್ಲಿ ಸೋಂಕು ದೃಢಪಟ್ಟಿದ್ದು ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್​ನಲ್ಲಿ ಪರೀಕ್ಷಿಸಲಾಗುತ್ತಿದ್ದ 1,313 ಸ್ಯಾಂಪಲ್​ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 1,47,275 ಸ್ಯಾಂಪಲ್​ಗಳನ್ನು ಪರೀಕ್ಷೀಸಲಾಗಿದ್ದು, 1,32,468 ನೆಗೆಟಿವ್ ಪ್ರಕರಣ ಹಾಗೂ 131 ಮೃತ ಪ್ರಕರಣ ವರದಿಯಾಗಿದೆ. 328 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಹಾಗೆ ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್​ಗಳನ್ನು ರಿಜೆಕ್ಟ್​ ಮಾಡಲಾಗಿದ್ದು, ಕಂಟೇನ್​​ಮೆಂಟ್​ ಝೋನ್ 162 ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details