ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಮನೆ ಕುಸಿದು ಇಬ್ಬರು ಮಹಿಳೆಯರು ಸಾವು - etv bharat kannada

ಧಾರಾಕಾರವಾಗಿ ಸುರಿದ ಮಳೆಯಿಂದ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.

two-women-died-in-house-collapse
ಬಾಗಲಕೋಟೆ:ಮನೆ ಕುಸಿದು ಇಬ್ಬರು ಮಹಿಳೆಯರು ಸಾವು

By

Published : Apr 7, 2023, 9:15 PM IST

ಬಾಗಲಕೋಟೆ:ಮಳೆ ಹಾಗೂ ಸಿಡಿಲಿನ ಅಬ್ಬರಕ್ಕೆ ಮನೆ ಕುಸಿದು ಇಬ್ಬರು ಮಹಿಳೆಯರು ಮೃತ ಪಟ್ಟಿರುವ ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿಯಿಡೀ ಸುರಿದ ಮಳೆಗೆ ಮಣ್ಣಿನ ಮೇಲ್ಛಾವಣಿ ಕುಸಿದು ಬಿದ್ದು ಮಲಗಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಯಂಕುಬಾಯಿ ಕುಲಕರ್ಣಿ (79), ಶಾರಾದಾ ಪತ್ತಾರ (61) ಮೃತರು. ಯಂಕುಬಾಯಿ ಕುಲಕರ್ಣಿ ಒಬ್ಬರೇ ಮನೆಯಲ್ಲಿ ಇರುವ ಕಾರಣ ಪ್ರತಿದಿನ ಶಾರಾದ ಪತ್ತಾರ ಸಹ ಅವರ ಮನೆಯಲ್ಲಿ ತಂಗುತ್ತಿದ್ದರು. ಅಗ್ನಿಶಾಮಕ ದಳ ಸಿಬ್ಬಂದಿಯ ಸಹಾಯದಿಂದ ಶವಗಳನ್ನು ಹೊರತಗೆಯಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಾದಾಮಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳ್ತಂಗಡಿ: ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಗೆಳತಿಯರು

ಸಿಡಿಲು ಬಡಿದು 15 ಕುರಿಗಳು ಸಾವು:ಮತ್ತೊಂದೆಡೆ, ಸಿಡಿಲು ಬಡಿದು 15 ಕುರಿಗಳು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಮಸೂತಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ತಳೇವಾಡ ಗ್ರಾಮದ ಚಂದ್ರಶೇಖರ ಮುಕನ್ನನವರ ಎಂಬುವವರಿಗೆ ಸೇರಿದ ಕುರಿಗಳಾಗಿವೆ. ಘಟನೆಯಲ್ಲಿ ಮಾಲಿಕ ಚಂದ್ರಶೇಖರ ಎಂಬವರಿಗೆ ಗಂಭೀರ ಗಾಯವಾಗಿದ್ದು, ಕೊಲ್ಹಾರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಸಿಲಿಂಡರ್​ ಸ್ಪೋಟಗೊಂಡು ಮನೆಗೆ ಬೆಂಕಿ : ನಾಲ್ಕು ಮಕ್ಕಳ ಸಾವು, ನಾಲ್ವರಿಗೆ ಗಂಭೀರ ಗಾಯ

ABOUT THE AUTHOR

...view details