ಕರ್ನಾಟಕ

karnataka

ETV Bharat / state

ಬಾಗಲಕೋಟೆ: ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ - ಬಾಗಲಕೋಟೆಯಲ್ಲಿ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಬಾಗಲಕೋಟೆ ಹಳೇ ತಹಶೀಲ್ದಾರ್​ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

VA detained by ACB while receiving bribe at Bagalkot
ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

By

Published : Feb 23, 2021, 8:06 PM IST

ಬಾಗಲಕೋಟೆ:ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರದ ಹಳೇ ತಹಶೀಲ್ದಾರ್​ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ವಿ.ಎನ್.ದೇಶಮಾನೆ ಎಸಿಬಿ ಬಲೆಗೆ ಬಿದ್ದಿದ್ದಾನೆ.

ವಿಧವಾ ವೇತನ ಅರ್ಜಿ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ಮಹಿಳೆಯೊಬ್ಬರಿಂದ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಎನ್ನಲಾಗಿದ್ದು, ಒಂದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ರೆಡ್​ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ಓದಿ : ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್​ ನೃತ್ಯ: ಅಸಮಾಧಾನಗೊಂಡ ಬಂಗಾರಪೇಟೆ ಶಾಸಕ

ಎಸಿಬಿ ಡಿವೈಎಸ್ಪಿ ಮಂಜುನಾಥ ಗಂಗಲ ನೇತೃತ್ವದಲ್ಲಿ ಇನ್ಸ್​ಪೆಕ್ಟರ್​ ಸಮೀರ್ ಮುಲ್ಲಾ, ವಿಶ್ವನಾಥ್​ ಚೌಗಲೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ABOUT THE AUTHOR

...view details