ಕರ್ನಾಟಕ

karnataka

ETV Bharat / state

ನಿಮ್ಮ ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆ ತೋರ್ಸಿ: ಬಿಜೆಪಿ ಅಭ್ಯರ್ಥಿಗೆ ವೀಣಾ ಕಾಶಪ್ಪನವರ ಸವಾಲು - undefined

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ವೀಣಾ ಕಾಶಪ್ಪನವರ. ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ವಿರುದ್ಧ ವೀಣಾ ಟಾಂಗ್. ಏಪ್ರಿಲ್ 1 ರಂದು ಕಾಂಗ್ರೆಸ್​ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ.

ವೀಣಾ ಕಾಶಪ್ಪನವರ

By

Published : Mar 28, 2019, 8:12 PM IST

ಬಾಗಲಕೋಟೆ:ಮೂರು ಬಾರಿ ಆಯ್ಕೆ ಆಗಿರುವ ಸಂಸದರು ತಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆಂದು ತೋರಿಸಲಿ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ಅವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ಅವಧಿಯಲ್ಲಿ ಹಿಂದಿನ ಸಂಸದರು ಯಾವ ರೀತಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಈ ಬಾರಿ ಮೋದಿ ಅಲೆ ನಡೆಯುವುದಿಲ್ಲ. ರಾಜ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಲಾಗುತ್ತಿದ್ದು, ಮಹಿಳಾ ಪರ ಒಲವು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೀಣಾ ಕಾಶಪ್ಪನವರ

ಇಂದು ಒಳ್ಳೆಯ ದಿನ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏಪ್ರಿಲ್ 1 ರಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಕಾಂಗ್ರೆಸ್​ ಮುಖಂಡರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಂಡು ನಾಮಪತ್ರ ಸಲ್ಲಿಸಲಾಗುವುದು ಎಂದು ವೀಣಾ ಕಾಶಪ್ಪನವರ ತಿಳಿಸಿದರು.

For All Latest Updates

TAGGED:

ABOUT THE AUTHOR

...view details