ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳಗಡೆ ಆಗಿರುವ ಸಂತ್ರಸ್ತರಿಗೆ ಸರ್ಕಾರಿ ನೌಕರಿ ಹಾಗೂ ಶಿಕ್ಷಣದಲ್ಲಿ ಪ್ರತಿಶತ 5 ರಷ್ಟು ಮೀಸಲಾತಿ ನೀಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಶಾಸಕ ಹಾಗೂ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ನಗರದ ಅಭಿವೃದ್ಧಿ ಪ್ರಾಧಿಕಾರ ನೂತನ ಸಭಾಂಗಣದಲ್ಲಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಸಮಾರಂಭ ನಡೆಯಿತು. ಈ ವೇಳೆ ಮಾತನಾಡಿದ ಅವರು, ಈ ಹಿಂದೆ ಸಂತ್ರಸ್ತರಿಗೆ ಶಿಕ್ಷಣದಲ್ಲಿ ಹಾಗೂ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ನೀಡಲಾಗಿತ್ತು. ಹತ್ತು ವರ್ಷದ ಬಳಿಕ ಮೀಸಲಾತಿಯನ್ನು ಸರ್ಕಾರ ಹಿಂದಕ್ಕೆ ಪಡೆದುಕೊಂಡಿತ್ತು. ಇದೀಗ ಮತ್ತೆ ಅದನ್ನು ಹತ್ತು ವರ್ಷ ಮುಂದುವರೆಸಬೇಕು ಎಂದು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.