ಬಾಗಲಕೋಟೆ: ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಸಿಗಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ಹುಕ್ಕೇರಿಯಲ್ಲಿ ನಡೆದ ಪಂಚಮಸಾಲಿ ಸಮಾಜದ ಹೋರಾಟದಲ್ಲಿ ಬಣಜಿಗ ಸಮಾಜವಾಗಲಿ, ಲಿಂಗಾಯತ ಅನ್ಯ ವರ್ಗದವರನ್ನು ಅವಹೇಳನ ಮಾಡಿ ಮಾತನಾಡಿಲ್ಲ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಸ್ಪಷ್ಟಪಡಿಸಿದರು.
ನವನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಸಮಾಜಕ್ಕೆ ಮೀಸಲಾತಿ ದೊರಕಿಸಿಕೊಳ್ಳಲು ಹೋರಾಟ ನಡೆಯುತ್ತಿದೆ. ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಹಾಗೂ ಲಿಂಗಾಯತ ಸಮಾಜದ ವರ್ಗದವರಿಗೆ ಓಬಿಸಿಯಲ್ಲಿ ಸೇರ್ಪಡೆ ಮಾಡಲು ಹೋರಾಟ ಮಾಡುತ್ತಿದ್ದೇವೆ. ಆದರೆ, ಯಾವುದೇ ಲಿಂಗಾಯತ ಸಮಾಜಕ್ಕೆ ನೋವಾಗುವ ರೀತಿಯಲ್ಲಿ ಹುಕ್ಕೇರಿಯ ಹೋರಾಟದ ಭಾಷಣದಲ್ಲಿ ಮಾತನಾಡಿಲ್ಲ ಎಂದರು.