ಬಾಗಲಕೋಟೆ:ಮೇ ತಿಂಗಳ ಅಂತ್ಯದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅವಧಿ ಮುಗಿಯುವ ಹಿನ್ನೆಲೆ, ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಮೇ ಅಂತ್ಯಕ್ಕೆ ಗ್ರಾಮ ಪಂಚಾಯತ್ ಅವಧಿ ಮುಕ್ತಾಯ..ಆಡಳಿತಾಧಿಕಾರಿಗಳ ನೇಮಕಕ್ಕೆ ಕ್ರಮ - District Panchayat election updates
ಮೇ ಅಂತ್ಯಕ್ಕೆ ಎಲ್ಲಾ ಗ್ರಾಮ ಪಂಚಾಯತ್ ಅವಧಿ ಕೊನೆಗೊಳ್ಳುವುದರಿಂದ ಈ ಬಾರಿ ಚುನಾವಣೆ ನಡೆಸುವುದಿಲ್ಲ. ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆ ಒಟ್ಟಿಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಕೊರೊನಾ ಸಂಬಂಧ ಜಿಲ್ಲಾ ಪಂಚಾಯತ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕೊರೊನಾ ವೈರಸ್ ಭೀತಿ ಹಿನ್ನೆಲೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವುದಿಲ್ಲ. ಸರ್ಕಾರ ಕೂಡಾ ಆರ್ಥಿಕ ಸಂಕಷ್ಟದಲ್ಲಿದ್ದು ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ನಿರ್ಧರಿಸಿದೆ. ಮೇ ಅಂತ್ಯದಲ್ಲಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಆಡಳಿತ ಮುಕ್ತಾಯ ಆಗಲಿದೆ. ಆದ್ದರಿಂದ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದರು.
ಲಾಕ್ಡೌನ್ ಪರಿಣಾಮ ಸರ್ಕಾರಿ ನೌಕರರ ಡಿಎ ಕಡಿತಗೊಳಿಸಲಾಗಿದೆ. ಜಿಲ್ಲಾ ಪಂಚಾಯತ್ ಆಡಳಿತ ಇನ್ನೂ ಒಂದು ವರ್ಷ ಅವಧಿ ಇದ್ದು, ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ಗೆ ಒಂದೇ ಬಾರಿ ಚುನಾವಣೆ ನಡೆಯಲಿದೆ. ಇದರಿಂದ ಸಿಬ್ಬಂದಿ ಕೊರತೆ ಸೇರಿದಂತೆ ಆರ್ಥಿಕ ವೆಚ್ಚವೂ ಕಡಿಮೆಯಾಗಲಿದೆ ಎಂದು ಹೇಳಿದರು.