ಕರ್ನಾಟಕ

karnataka

ETV Bharat / state

ವಿಮೂಲ್​​​ನಲ್ಲಿದೆ ನೌಕರಿ; 97 ಸಾವಿರದವರೆಗೆ ವೇತನ - ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಒಟ್ಟು 40 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

Vimul Recruitment for Various Post
Vimul Recruitment for Various Post

By

Published : Mar 25, 2023, 11:44 AM IST

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ (ವಿಮೂಲ್​) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಕಿರಿಯ ತಾಂತ್ರಿಕರು ಸೇರಿದಂತೆ ಒಟ್ಟು 40 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ನೇರ ನೇಮಕಾತಿ ಮೂಲಕ ಈ ಹುದ್ದೆ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆ ವಿವರ: ವಿಮೂಲ್​ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು, ತಾಂತ್ರಿಕ ಅಧಿಕಾರಿ, ವಿಸ್ತರಣ ಅಧಿಕಾರಿ, ಕಿರಿಯ ಸಿಸ್ಟಂ ಆಪರೇಟರ್​, ಆಡಳಿತ ಸಹಾಯಕ ದರ್ಜೆ, ಮಾರುಕಟ್ಟೆ ಸಹಾಯಕರು ದರ್ಜೆ-2, ಕಿರಿಯ ತಾಂತ್ರಿಕ, ಹಾಲು ರವಾನೆಗಾರರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿವಿಎಸ್​ಸಿ, ಬಿಎಸ್​ಸಿ, ಬಿಕಾಂ, ಬಿಬಿಎ, ಬಿಎಸ್ಸಿ, ಪಿಯುಸಿ, ಎಸ್​ಎಸ್​ಎಲ್​ಸಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಹುದ್ದೆ ಅಧಿಸೂಚನೆ

ವೇತನ: ವಿವಿಧ ಹುದ್ದೆಗಳ ಶ್ರೇಣಿಗೆ ಅನುಸಾರವಾಗಿ 21400 ರೂ ನಿಂದ 97100 ರೂವರೆಗೆ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ವಿವರ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ನಿಬಂಧನೆಗಳನ್ನು ಅಭ್ಯರ್ಥಿಗಳು ಸೂಕ್ತವಾಗಿ ಪರಿಶೀಲಿಸಬೇಕಿದೆ. ಬಳಿಕ ಸೂಕ್ತ ದಾಖಲೆ ಮತ್ತು ಪ್ರಮಾಣ ಪತ್ರದೊಂದಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ಪ. ಜಾ, ಪ. ಪಂ, ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ, ಇತರೆ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕವನ್ನು ನಿಗದಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾರ್ಚ್​ 24ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಏಪ್ರಿಲ್​ 25 ಆಗಿದೆ. ಅರ್ಜಿ ಶುಲ್ಕ ಪಾವತಿಗೂ ಏಪ್ರಿಲ್​ 25 ಕಡೆಯ ದಿನ ಆಗಿದೆ

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಈ bimul.coop ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ತುಮುಲ್​ನಲ್ಲಿದೆ ಉದ್ಯೋಗಾವಕಾಶ! 219 ಹುದ್ದೆಗಳಿಗೆ ಅರ್ಜಿ ಆಹ್ವಾನ- ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ

ABOUT THE AUTHOR

...view details