ಬಾಗಲಕೋಟೆ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ತಾಲೂಕಿನ ವಿಶೇಷ ತಹಶೀಲ್ದಾರ್ ಎಸ್.ಬಿ. ಕಾಂಬಳೆ ಅವರಿಗೆ ಬನಹಟ್ಟಿ ಹಿರಿಯ ದಿವಾಣಿ ನ್ಯಾಯಾಧೀಶ ಕಿರಣಕುಮಾರ ವಡಿಗೇರಿ ಅವರು 3 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.
ನಾವಲಗಿ ಗ್ರಾಮದ ಅಣ್ಣಪ್ಪ ಹಣಮಂತ ಮಾಂಗ ಹಾಗು ಇತರರು ಸೇರಿ ನ್ಯಾಯಾಲಯದ ನಿಂದನೆ ಪ್ರಕರಣವನ್ನು ಜಮಖಂಡಿಯಲ್ಲಿ ದಾಖಲಿಸಿದ್ದರು. ನಂತರದ ದಿನಗಳಲ್ಲಿ ಬನಹಟ್ಟಿಯಲ್ಲಿ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಲಯ ಸ್ಥಾಪನೆಗೊಂಡ ಕಾರಣ ಪ್ರಕರಣ ವರ್ಗಾವಣೆಗೊಂಡಿತ್ತು. ಹಣಮಂತ ಮಾಂಗ ಎಂಬುವರು ಕಂದಾಯ ನಿರೀಕ್ಷಕರಿಗೆ ಅರ್ಜಿ ನೀಡದೇ ಹಕ್ಕು ಬದಲಾವಣೆ ಮಾಡಿದ್ದರಿಂದ ಜೈಲು ಶಿಕ್ಷೆಗೆ ಗುರಿಪಡಿಸಲಾಗಿದೆ ಎಂದು ತಿಳಿದು ಬಂದಿದೆ.