ಬಾಗಲಕೋಟೆ :ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನತೆ ಕೊಟ್ಟ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಾದಾಮಿಯಲ್ಲಿ ಮಾತನಾಡಿದ ಅವರು, ಬೈ ಎಲೆಕ್ಷನ್ನಲ್ಲಿ ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ. ಶಿರಾ, ಆರ್‌ಆರ್‌ನಗರ ಬೈ ಎಲೆಕ್ಷನ್ ಗೆಲುವಿಗಾಗಿ ಹಣದ ಹೊಳೆಯನ್ನೇ ಹರಿಸಿದೆ. ಹೀಗಾಗಿ, ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದರು.
ಉಪ ಚುನಾವಣೆಯಲ್ಲಿ ಜನರು ಕೊಟ್ಟ ತೀರ್ಪನ್ನು ಒಪ್ಪಿಕೊಳ್ಳಬೇಕಿದೆ.. ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಸೋಲನ್ನು ಯಾರ ಮೇಲೆ ಹೊರೆಸುವ ಅಗತ್ಯವಿಲ್ಲ. ಸಾಮಾನ್ಯವಾಗಿ ಅಧಿಕಾರದಲ್ಲಿದ್ದ ಪಕ್ಷಕ್ಕೆ ಜನರ ಒಲವಿರುತ್ತದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ನಾವೇ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗ ಯಡಿಯೂರಪ್ಪನವರ ಕುರ್ಚಿ ಭದ್ರವಿಲ್ಲ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತಂತ್ರ ನಡೆದಿದೆ ಎಂದರು.