ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದ ಬಾಣಂತಿ ಮೃತಪಟ್ಟ ಆರೋಪ ಕೇಳಿಬಂದಿದೆ. ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಹೆರಿಗೆ ನಂತರ ಶಸ್ತ್ರಚಿಕಿತ್ಸೆಗೆ ಬಂದ ಕೊಕಟನೂರ ಗ್ರಾಮದ ನೀಲವ್ವ ಹೂಗಾರ (25) ಎಂಬುವರು ಮೃತಪಟ್ಟಿದ್ದಾರೆ. ಹೈಡೋಸ್ ಅರವಳಿಕೆ ಮದ್ದು ನೀಡಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಮಕ್ಕಳು ಆಗದಂತೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮಹಿಳೆಯು ಆಸ್ಪತ್ರೆಗೆ ಬಂದಿದ್ದಳು. ಆಗ ಸರ್ಕಾರಿ ಆಸ್ಪತ್ರೆಯವರು, ಅರವಳಿಕೆ ಮದ್ದು ನೀಡಿದ ಬಳಿಕ ಹೈಡೋಜ್ ಆದ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಆಸ್ಪತ್ರೆ ಎದುರು ಕುಟುಂಬಸ್ಥರೊಂದಿಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ವೈದ್ಯರ ವಿರುದ್ದ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅಧಿಕಾರಿಗಳು ಈ ಕೂಡಲೇ ಗಮನಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಓದಿ:ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಸ್ಪತ್ರೆಯವರ ಎಡವಟ್ಟು ಆರೋಪ: ಹಾರಿಹೋದ ಬಾಣಂತಿ ಪ್ರಾಣ