ಬಾಗಲಕೋಟೆ :ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮ ಪಂಚಾಯಿತಿಯಲ್ಲಿ ಋತುಚಕ್ರ ಶುಚಿತ್ವ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಈಶ್ವರ ಗಾಣಗೇರ ಚಾಲನೆ ನೀಡಿದರು.
ಋತುಚಕ್ರ ಶುಚಿತ್ವ ದಿನಾಚರಣೆ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಬಾಗಲಕೋಟೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮ ಪಂಚಾಯಿತಿಯಲ್ಲಿ ಋತುಚಕ್ರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಲ್ಲಿ ಋತುಚಕ್ರದ ಬಗ್ಗೆ ಕೀಳರಿಮೆ ಇರಬಾರದು. ಇಂದು ಪ್ರತಿಯೊಂದು ಮನೆಯಲ್ಲಿಯೂ ಮಹಿಳೆಯರು ಇದ್ದಾರೆ. ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರು ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಗಂಗಮ್ಮ ಪಾಟೀಲ್ ಮಾತನಾಡಿ, ಹಿಂದೆ ಮಹಿಳೆಯರಲ್ಲಿ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಕೊರತೆಯಿಂದ ಶುಚಿತ್ವದ ಬಗ್ಗೆ ಅರಿವು ಇರಲಿಲ್ಲ. ಆದರೆ ಈಗ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ಸಿಗುತ್ತಿರುವುದರಿಂದ ಜಾಗೃತಿ ಉಂಟಾಗಿದೆ. ಋತುಚಕ್ರದ ಅವಧಿಯಲ್ಲಿ ಮಹಿಳೆಯರು ಶುಚಿತ್ವ ಕಾಪಾಡಿಕೊಳ್ಳಬೇಕು. ಋತು ಚಕ್ರದ ಅವಧಿಯಲ್ಲಿ ಭಾರವಾದ ಕೆಲಸವನ್ನು ಮಾಡಬಾರದು ಎಂದು ಹೇಳಿದರು.