ಬಾಗಲಕೋಟೆ:ಜಿಲ್ಲೆಯಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರವನ್ನು ಬಿಜೆಪಿ ಪಕ್ಷದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿತ್ತು.
ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ಮಾಹಿತಿ ನೀಡುವ ಕಾರ್ಯಾಗಾರ ಬಸವೇಶ್ವರ ವಿದ್ಯಾವರ್ಧಕ ಸಂಘದ ನೂತನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ವಕ್ತಾರ ಆಗಿರುವ ವಿವೇಕ ರೆಡ್ಡಿ ,ಜಿಲ್ಲಾಧ್ಯಕ್ಷ ಸಿದ್ದು ಸವದಿ ಹಾಗೂ ಮಾಜಿ ಶಾಸಕರಾದ ಪಿ.ಹೆಚ್.ಪೂಜಾರ ಸೇರಿದಂತೆ ಇತರೆ ಮುಖಂಡರು ಭಾಗಿಯಾಗಿದ್ದರು. ದೇಶಕ್ಕಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು.
ಈ ಸಂದರ್ಭದಲ್ಲಿ ವಿವೇಕ ರೆಡ್ಡಿ ಮಾತನಾಡಿ, ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷದವರು ವಿನಾಕಾರಣ ವಿರೋಧ ಮಾಡಿ, ಪೌರತ್ವ ಕಾಯ್ದೆ ಬಗ್ಗೆ ಅಪ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದವರು ಪೌರತ್ವದ ಬಗ್ಗೆ ಜನಜಾಗೃತಿ ಮೂಡಿಸಬೇಕಾಗಿದೆ ಎಂದರು.
ಪೌರತ್ವ ಕಾಯ್ದೆಯಿಂದ ದೇಶದಲ್ಲಿರುವ ಮುಸ್ಲೀಮರಿಗೆ ಯಾವುದೇ ತೊಂದರೆ ಇಲ್ಲ. ಕಾಯ್ದೆ ಸಲುವಾಗಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಹೇಳಿದ್ರು. ಇದೇ ಸಮಯದಲ್ಲಿ ಕಾರ್ಯಕರ್ತರು, ವಿವೇಕ ರೆಡ್ಡಿಯವರೊಂದಿಗೆ ಸಂವಾದ ನಡೆಸಿದರು.