ಬಾಗಲಕೋಟೆ: ಜೀವನದಲ್ಲಿ ಜಿಗುಪ್ಸೆಗೊಂಡು ಹಾಗೂ ಕ್ರಿಕೆಟ್ ಐಪಿಎಲ್ ಬೆಟ್ಟಿಂಗ್ನಲ್ಲಿ ಸೋತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಳಕಲ್ಲ ಪಟ್ಟಣದಲ್ಲಿ ಜರುಗಿದೆ.
ಜೀವನದಲ್ಲಿ ಜಿಗುಪ್ಸೆ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ - Young man commit suicide
ಜೀವನದಲ್ಲಿ ಜಿಗುಪ್ಸೆಗೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ಜರುಗಿದೆ.

ಜೀವನದಲ್ಲಿ ಜಿಗುಪ್ಸೆ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಭೀಮಶಿ ಲಕ್ಷಣ ಚಿತ್ತರಗಿ (22) ಮೃತ ಯುವಕ. ಈತ ರಾಷ್ಟ್ರೀಯ ಹೆದ್ದಾರಿ 50ರ ಪಕ್ಕದ ಗೊರಬಾಳ ರಸ್ತೆಯಲ್ಲಿ ಫ್ರೆಂಡ್ಸ್ ಗಡಗಿ ಡಾಬಾ ನಡೆಸುತ್ತಿದ್ದು, ಅಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ತಂದೆ-ತಾಯಿ ತೀರಿಹೋಗಿದ್ದ ಕಾರಣ ಅನಾಥ ಪ್ರಜ್ಞೆ ಕಾಡುತ್ತಿತ್ತು. ಇದರ ಜೊತೆಗೆ ಬೆಟ್ಟಿಂಗ್ನಲ್ಲಿ ಸಾಲ ಮಾಡಿದ್ದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗ್ತಿದೆ.
ಈ ಸಂಬಂಧ ಇಳಕಲ್ಲ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.