ಬಾಗಲಕೋಟೆ:ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್ ಜೈನ್ ತಿಳಿಸಿದ್ದಾರೆ.
ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಕ್ರಮ ವಹಿಸಲು ಸೂಚನೆ - ಮತದಾರರ ಪಟ್ಟಿಯಲ್ಲಿ ಅಲೇಮಾರಿ ಜನಾಂಗ ಹಾಗೂ ಸುಡುಗಾಡು ಸಿದ್ದರು
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್ ಜೈನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಮತದಾರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಬೂತ್ ಮಟ್ಟದ ಬಿಎಲ್ಓ (ಬೂತ್ ಲೆವೆಲ್ ಆಫೀಸರ್)ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಿ ಭೇಟಿ ನೀಡಿ ಪರಿಶೀಲಿಸುವ ಕಾರ್ಯವಾಗಬೇಕುರು. ಮತದಾರರ ಪಟ್ಟಿಯಲ್ಲಿ ಅಲೆಮಾರಿ ಜನಾಂಗ ಹಾಗೂ ಸುಡುಗಾಡು ಸಿದ್ದರು ಬಿಟ್ಟು ಹೋಗಬಾರದು. ಎಲ್ಲಾ ತಹಶೀಲ್ದಾರರು ಚುರುಕಾಗಿ ಕಾರ್ಯನಿರ್ವಹಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾಮಟ್ಟದಲ್ಲಿ ದಿನದ 24 ಗಂಟೆಗಳ ಕಂಟ್ರೋಲ್ ರೂಮ್ ತೆರೆದು, ಸ್ವೀಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು. ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು ಮನೋಜ್ ಜೈನ್ ತಿಳಿಸಿದರು. ಜಿಲ್ಲೆಯಲ್ಲಿ ಮಿಂಚಿನ ನೋಂದಣಿಯಲ್ಲಿ 18-19 ವಯಸ್ಸಿನ 5640 ಮತದಾರರು ಹೆಸರು ನೋಂದಾಯಿಸಿದ್ದಾರೆ. ಕಳೆದ ಡಿಸೆಂಬರ್ 16ರಿಂದ ಜನವರಿ 23ರವರೆಗೆ ಜಿಲ್ಲೆಯಲ್ಲಿ ಒಟ್ಟು 31880 ಅರ್ಜಿಗಳನ್ನು ಡಿಜಿಟಲೈಜ್ಡ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದರು.