ದೊಡ್ಡಬಳ್ಳಾಪುರ : ಇಂದಿನಿಂದ SSLC ಪರೀಕ್ಷೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಾವುದೇ ಗೊಂದಲ ಇಲ್ಲದೆ ಪ್ರಥಮ ಭಾಷೆಯ ಪರೀಕ್ಷೆ ಮುಗಿದಿದೆ. ಪ್ರಥಮ ಭಾಷೆ ಪರೀಕ್ಷೆಗೆ ಇಂದು 132 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 58 ಪರೀಕ್ಷಾ ಕೇಂದ್ರಗಳನ್ನ ತೆರೆಯಲಾಗಿದ್ದು, ಖಾಸಗಿ ವಿದ್ಯಾರ್ಥಿಗಳಿಗಾಗಿ ದೇವನಹಳ್ಳಿಯಲ್ಲಿ 2 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ : ಬೆಂ. ಗ್ರಾ. ಜಿಲ್ಲೆಯಲ್ಲಿ ಮೊದಲ ದಿನವೇ 132 ವಿದ್ಯಾರ್ಥಿಗಳು ಗೈರು
ಬೆಂ. ಗ್ರಾ. ಜಿಲ್ಲೆಯಲ್ಲಿ ಪ್ರಥಮ ಬಾರಿ ಪರೀಕ್ಷೆ ತೆಗೆದುಕೊಂಡ 13,534 ವಿದ್ಯಾರ್ಥಿಗಳ ಪೈಕಿ 13,470 ವಿದ್ಯಾರ್ಥಿಗಳು ಹಾಜರಾಗಿದ್ದು 64 ವಿದ್ಯಾರ್ಥಿಗಳು ಗೈರಾಗಿದ್ದರು. 517 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇವರ ಪೈಕಿ 449 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 68 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ
ಇಂದು ನಡೆದ SSLC ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 132 ವಿದ್ಯಾರ್ಥಿಗಳು ಗೈರಾಗಿದ್ದರು. ಪ್ರಥಮ ಬಾರಿ ಪರೀಕ್ಷೆ ತೆಗೆದುಕೊಂಡ 13,534 ವಿದ್ಯಾರ್ಥಿಗಳ ಪೈಕಿ 13,470 ವಿದ್ಯಾರ್ಥಿಗಳು ಹಾಜರಾಗಿದ್ದು, 64 ವಿದ್ಯಾರ್ಥಿಗಳು ಗೈರಾಗಿದ್ದರು. 517 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇವರ ಪೈಕಿ 449 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 68 ವಿದ್ಯಾರ್ಥಿಗಳು ಗೈರಾಗಿದ್ದಾರೆ.