ಹೊಸಕೋಟೆ: ಹೊಸಕೋಟೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 23 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಹೊಸಕೋಟೆಯಲ್ಲಿ ಒಂದೇ ದಿನ 23 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ! - Hosakote positive
ಸಂಪರ್ಕ ಪತ್ತೆಯಾಗದ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗುತ್ತಿದೆ. ನಗರದಲ್ಲಿ ಎಷ್ಟೇ ಕ್ರಮಗಳನ್ನು ಕೈಗೊಂಡರು ಸೋಂಕಿತ ಪ್ರಕರಣಗಳು ಕಡಿಮೆ ಆಗುತ್ತಿಲ್ಲ. ಕಳೆದ ಹದಿನೈದು ದಿನಗಳಲ್ಲಿ 70ಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಕೊರೊನಾ

ಕಳೆದ ಹದಿನೈದು ದಿನಗಳ ಹಿಂದೆ ಸೋಂಕು ತಗುಲಿದ ವ್ಯಕ್ತಿ ಮರಣ ಹೊಂದಿದ್ದರು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಂತ್ಯಕ್ರಿಯೆಯಲ್ಲಿ 150ಕ್ಕೂ ಹೆಚ್ಚು ಜನ ಭಾಗಿಯಾದ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಆಪಾದನೆ ಕೇಳಿಬಂದಿದೆ.