ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಕೊರೊನಾ ನಡುವೆ 235 ಬಾಲ್ಯವಿವಾಹ ಪ್ರಕರಣ: ಸಚಿವೆ ಶಶಿಕಲಾ ಜೊಲ್ಲೆ - CM BS Yeddyurappa

ಬಾಲ್ಯ ವಿವಾಹ ತಟೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಇನ್ನಿಲ್ಲದ ಪರಿಶ್ರಮ ಹಾಕುತಲಿದೆ. ಆದರೆ ಲಾಕ್​ಡೌನ್​ ನಡುವೆಯೇ ರಾಜ್ಯದಲ್ಲಿ 235 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ 9 ಪ್ರಕರಣಗಳು ಪತ್ತೆಯಾಗಿವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ.

235 child marriage cases detected in state between Corona: Shashikala Jolle
ಕೊರೊನಾ ನಡುವೆ ರಾಜ್ಯದಲ್ಲಿ 235 ಬಾಲ್ಯ ವಿವಾಹ ಪ್ರಕರಣ ಪತ್ತೆ: ಶಶಿಕಲಾ ಜೊಲ್ಲೆ

By

Published : Jun 13, 2020, 2:28 AM IST

ದೇವನಹಳ್ಳಿ (ಬೆಂ.ಗ್ರಾ):ಕೊರೊನಾ ಭೀತಿಯಿಂದ ಲಾಕ್‌ಡೌನ್ ಆದ ದಿನಗಳಲ್ಲಿ ರಾಜ್ಯದಲ್ಲಿ 235 ಬಾಲ್ಯವಿವಾಹ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ಪ್ರಕರಣ ಪತ್ತೆಯಾಗಿದ್ದು, ಪೋಕ್ಸೋ ಕಾಯ್ದೆಯಡಿ ಒಂದು ಪ್ರಕರಣ ದಾಖಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಪ್ರಾಪ್ತ ಬಾಲಕಿಯರನ್ನ ಪೋಷಕರ ವಶಕ್ಕೆ ನೀಡಲಾಗಿದೆ. ಕೆಲವು ಬಾಲಕಿಯರಿಗೆ ಬಾಲಕಿಯರ ಮಂದಿರದಲ್ಲಿ ರಕ್ಷಣೆ ನೀಡಲಾಗಿದೆ. ಬಾಲ್ಯವಿವಾಹದಿಂದ ಆಗುವ ಸಮಸ್ಯೆಗಳ ಕುರಿತು ಹೆಚ್ಚು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಪರಿಣಿತರೊಂದಿಗೆ ಈಗಾಗಲೇ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಆಹಾರ ವಿತರಣೆಯಲ್ಲಿ ಉತ್ತಮ ರೀತಿಯಲ್ಲಿ ಮಾರ್ಪಾಡು ಮಾಡಲಾಗುವುದು. ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡಗಳನ್ನು ಗುರುತಿಸಿ ಅಂತಹ ಕಟ್ಟಡಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಮಕ್ಕಳು ಹಾಗೂ ಪೋಷಕರನ್ನು ಆಕರ್ಷಿಸುವ ಹಾಗೆ ಅಂಗನವಾಡಿ ಕಟ್ಟಡಗಳನ್ನು ಮಾರ್ಪಡಿಸಲು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಫೋನ್‌ಗಳನ್ನು ನೀಡಲಾಗುತ್ತಿದ್ದು, ಅಂಗನವಾಡಿಯ ಮಾಹಿತಿ ಸಂಗ್ರಹವನ್ನು ಡಿಜಿಟಲೀಕರಣಗೊಳಿಸುವ ಮೂಲಕ ಆಹಾರ ಸೋರಿಕೆಯನ್ನು ತಡೆಗಟ್ಟಲು ಕ್ರಮಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ದಮನಿತ ಮಹಿಳೆಯರು, ಹೆಚ್ಐವಿ ಸೋಂಕಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಸಾಕಷ್ಟು ಶೋಚನೀಯ ಸ್ಥಿತಿಯಲ್ಲಿದ್ದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹಾಗೂ ಗೌರವಯುತ ಜೀವನ ರೂಪಿಸಿಕೊಳ್ಳಲು ಸರ್ಕಾರದಿಂದ ಸಹಾಯಸ್ತ ನೀಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ABOUT THE AUTHOR

...view details