ದೇವನಹಳ್ಳಿ :ಕೊರೊನಾ ಕಾರಣದಿಂದಬೆಂಗಳೂರು ಗ್ರಾಮಾಂತರ ಜಿಲ್ಲೆಯ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ 23 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಸಮ್ಮೇಳನ ವಿರೋಧಿಸಿರುವ ಕನ್ನಡ ಪರ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿವೆ.
22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕಳೆದ ಮಾರ್ಚ್ ತಿಂಗಳಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿತ್ತು. ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಹೋರಾಟಗಾರ ತ.ನ.ಪ್ರಭುದೇವ್ ಆಯ್ಕೆಯಾಗಿದ್ದರು. ಆದರೆ ಕೊರೊನಾ ನೆಪದಲ್ಲಿ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಿರಲಿಲ್ಲ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಚಿ.ಮಾ. ಸುಧಾಕರ್ ಏಕಾಏಕಿ 23 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಆಯೋಜನೆ ಮಾಡಿದ್ದಾರೆ. ಜಿಲ್ಲಾ ಕಸಾಪ ಪದಾಧಿಕಾರಿಗಳ ಗಮನಕ್ಕೂ ತರದೇ ಏಕಪಕ್ಷೀಯ ತೀರ್ಮಾನದಂತೆ ಚಿ.ಮಾ.ಸುಧಾಕರ್ ವಿಜಯಪುರದಲ್ಲಿ 23 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ್ದಾರೆ.