ಹೊಸಕೋಟೆ:ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗರ್ಭಿಣಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದಾಗಿ ಜಿಲ್ಲಾಡಳಿತ ವರದಿ ಪ್ರಕಟಿಸಿದೆ.
ಹೊಸಕೋಟೆಯಲ್ಲಿ 8 ತಿಂಗಳ ಗರ್ಭಿಣಿಗೆ ಕೊರೊನಾ - ಕೊರೊನಾ ಮಹಾಮಾರಿ
ಹೊಸಕೋಟೆಯ ಕೊರಟಿ ಗ್ರಾಮದ 22 ವರ್ಷದ 8 ತಿಂಗಳ ಗರ್ಭಿಣಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈಕೆ ಕೋಲಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಂಗಳ ಚಿಕಿತ್ಸೆಗೆಂದು ಹೋದಾಗ ಕೊರೊನಾ ಇರುವುದು ದೃಢಪಟ್ಟಿದೆ.

ಕೊರಟಿ ಗ್ರಾಮದ 22 ವರ್ಷದ 8 ತಿಂಗಳ ಗರ್ಭಿಣಿಗೆ ಕೊರೊನಾ ವಕ್ಕರಿಸಿದೆ. ಈಕೆ ಕೋಲಾರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತಿಂಗಳ ಚಿಕಿತ್ಸೆಗೆಂದು ಹೋದಾಗ ಕೊರೊನಾ ಇರುವುದು ದೃಢಪಟ್ಟಿದೆ. ಈ ವಿಷಯವನ್ನು ಅಲ್ಲಿನ ವೈದ್ಯಾಧಿಕಾರಿಗಳು ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಜಿಲ್ಲಾ ವೈದ್ಯಾಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಸೋಂಕಿತೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಸೋಂಕಿತೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಗಂಡ, ಅತ್ತೆ, ಮಾವ ಸೇರಿದಂತೆ ಮೂವರನ್ನು 14 ದಿನಗಳ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದ್ದು, ನಾಕಾಬಂದಿ ಮಾಡಿ ಚೆಕ್ ಪೋಸ್ಟ್ ಹಾಕಲಾಗಿದೆ. ಔಷಧಿ ಮತ್ತಿತರ ಅಗತ್ಯ ವಸ್ತುಗಳ ಸೇವೆಗೆಂದು ಸಹಾಯವಾಣಿ ತೆರೆಯಲಾಗಿದೆ ಎಂದು ಹೊಸಕೋಟೆ ತಾಲೂಕು ದಂಡಾಧಿಕಾರಿ ಗೀತಾ ತಿಳಿಸಿದ್ದಾರೆ.