ಕರ್ನಾಟಕ

karnataka

ETV Bharat / state

ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂಬ ಕನಸು ಈಡೇರದ್ದಕ್ಕೆ ಬೆಂಗಳೂರಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ - etv bharat karnataka

ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ಹುಬ್ಬಳ್ಳಿ ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

A Hubli based student committed suicide in Bangalore
ಬೆಂಗಳೂರಿನಲ್ಲಿ ಹುಬ್ಬಳ್ಳಿ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

By

Published : Dec 20, 2022, 5:24 PM IST

ನೆಲಮಂಗಲ: ವಿದೇಶದಲ್ಲಿ ವ್ಯಾಸಂಗ ಮಾಡಬೇಕು ಅಂದುಕೊಂಡಿದ್ದ ಯುವಕನೊಬ್ಬ ಹೆಚ್ಚು ಅಂಕಗಳಿಸಲು ಸಾಧ್ಯವಾಗದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಆದಿತ್ಯ ಸಂಕಣ್ಣ (18) ಆತ್ಮಹತ್ಯೆಗೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಆಚಾರ್ಯ ಕಾಲೇಜಿನಲ್ಲಿ ಡಿಪ್ಲೋಮಾ ಕಂಪ್ಯೂಟರ್ ಸೈನ್ಸ್ 3 ನೇ ಸೆಮಿಸ್ಟರ್ ವ್ಯಾಸಂಗ‌ ಮಾಡುತ್ತಿದ್ದ. ಈತ ವಿದೇಶದಲ್ಲಿ ವ್ಯಾಸಂಗ ಮಾಡಬೇಕು ಅಂದುಕೊಂಡಿದ್ದ. ಆದರೆ ಹೆಚ್ಚು ಅಂಕಗಳಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಸಾವಿಗೆ ಶರಣಾಗಿದ್ದಾನೆ ಎಂದು ಹೇಳಲಾಗ್ತಿದೆ.

ಈ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆ ಮತ್ತು ಭರವಸೆ ಕಳೆದುಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಈ ಕುರಿತು ಡೆತ್ ನೋಟ್​ ಸಹ ಬರೆದಿಟ್ಟಿದ್ದಾನೆ ಎಂದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ಹಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಸಾಲವೇ ಕುಟುಂಬಕ್ಕೆ ಶೂಲವಾಯ್ತಾ?

ABOUT THE AUTHOR

...view details