ಆನೇಕಲ್: ಬೈಕ್ಗೆ ಟ್ಯಾಂಕರ್ ಲಾರಿ ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಅಕ್ಕ-ತಮ್ಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ನೆರಿಗಾ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಅಕ್ಕ-ತಮ್ಮ ಸಾವು: ಅಂತ್ಯಕ್ರಿಯೆ ಮಾಡಿ ಮಾನವೀಯತೆ ಮೆರೆದ ಗ್ರಾಮಸ್ಥರು - kannadanews
ನೀರಿನ ಟ್ಯಾಂಕರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸಾವನ್ನಪ್ಪಿದ್ದು, ಅವರು ಅನಾಥರಾದ ಕಾರಣ ಗ್ರಾಮಸ್ಥರೇ ಮುಂದೆ ಬಂದು ಶವ ಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಮೃತರನ್ನು ರತ್ನಮ್ಮ ಮತ್ತು ಗಿರೀಶ್ ಎಂದು ಗುರುತಿಸಲಾಗಿದ್ದು, ಇವರು ತಮಿಳುನಾಡು ಮೂಲದವರಾಗಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ. ಇಬ್ಬರೂ ಆಫೀಸಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ಶವ ಸಂಸ್ಕಾರ ಮಾಡೋದಕ್ಕೆ ಸಂಬಂಧಿಕರು ಇಲ್ಲದ ಕಾರಣ ಊರಿನ ಜನರೇ ಮುಂದೆ ಬಂದು ಶವ ಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಆನೇಕಲ್ ಬಳಿಯ ವರ್ತೂರು ಮುಖ್ಯ ರಸ್ತೆಯ ಗುಂಜೂರುನಿಂದ ಸರ್ಜಾಪುರ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಆಗ್ತಿವೆ. ಹೀಗಾಗಿ ಈ ಮಾರ್ಗವಾಗಿ ಹೋಗೋ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಈ ಮಾರ್ಗದಲ್ಲಿ ಲಾರಿಗಳು, ಭಾರಿ ಗಾತ್ರದ ವಾಹನಗಳ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಘಟನಾ ಸ್ಥಳಕ್ಕೆ ಡಿವೈಎಸ್ಪಿ ನಂಜುಂಡಗೌಡ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಟ್ಯಾಂಕರ್ ಚಾಲಕ ಪರಾರಿಯಾದ್ದು, ಅತನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.