ಬೆಂಗಳೂರು: ಇಂದು ವಿಂಗ್ ಕಮಾಂಡರ್ ಅಭಿನಂದನ್ ಮರಳಿ ಭಾರತಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು.
ಅಭಿನಂದನ್ ಮರಳಿ ಭಾರತಕ್ಕೆ: ಬೆಂಗಳೂರಿನಲ್ಲಿ ಸಂಭ್ರಮಾಚರಣೆ - undefined
ವಿಂಗ್ ಕಮಾಂಡರ್ ಅಭಿನಂದನ್ ಮರಳಿ ಭಾರತಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು
ಕನ್ನಡ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಸಂಭ್ರಮಾಚರಣೆ
ಈ ಕಾರ್ಯಕ್ರಮ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದ್ದು, ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ದೇಶದ್ರೋಹಿಗಳ ಸಂಖ್ಯೆ ಹೆಚ್ಚುತ್ತಿದೆ. ಇಂತಹ ನೀಚ ದೇಶದ್ರೋಹಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದ ಮಾಜಿ ಸಂಸದೆ ರಮ್ಯ ಮತ್ತು ಖ್ಯಾತ ಕ್ರಿಕೆಟಿಗ ಸಿಧು ಭಾವಚಿತ್ರಗಳಿಗೆ ಉಗುಳಿ ಇವರನ್ನು ಪಾಕಿಸ್ತಾನಕ್ಕೆ ನೀಡುವುದಾಗಿ ಇಬ್ಬರ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.