ಆನೇಕಲ್:ವಿದ್ಯುತ್ ಮೀಟರ್ ಬದಲಾವಣೆ ಮಾಡಿಕೊಡಲು ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬೆಸ್ಕಾಂ ಸಿಬ್ಬಂದಿ - ACB attack
ವ್ಯಕ್ತಿಯೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬೆಸ್ಕಾಂ ಸಿಬ್ಬಂದಿ
ಈ ಬಗ್ಗೆ ದೂರು ಬಂದ ಹಿನ್ನೆಲೆ ಇಲ್ಲಿನ ಬೆಸ್ಕಾಂ ಎಇ ನಂಜುಂಡಸ್ವಾಮಿ ಹಾಗೂ ಮೀಟರ್ ರೀಡರ್ ರಾಜೇಶ್ ಎಂಬುವವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವ್ಯಕ್ತಿಯೊಬ್ಬರಿಂದ 65 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ. ಪ್ರಕಾಶ್ ಎಂಬುವವರ ದೂರಿನ ಮೇಲೆ ಎಸಿಬಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ ನೇತೃತ್ವದ ತಂಡ ದಾಳಿ ಮಾಡಿದೆ.