ದೊಡ್ಡಬಳ್ಳಾಪುರ:ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಇಲ್ಲಿನ ನಗರಸಭೆಯ ಪೌರಕಾರ್ಮಿಕನ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ನಗರಸಭೆಯ ಪೌರಕಾರ್ಮಿಕರ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಬಾಬುರವರ ಮಾರುತಿನಗರ ನಿವಾಸ ಮತ್ತು ಸಂಬಂಧಿಕರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಜಗದೀಶ್ ನೇತೃತ್ವದಲ್ಲಿ ಮೂರು ಕಾರುಗಳಲ್ಲಿ ಬಂದ ಅಧಿಕಾರಿಗಳು ತಂಡ ಎರಡು ಕಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.