ನೆಲಮಂಗಲ:ಡಿವೈಡರ್ ಹಾರಿ ಬಂದ ಸ್ವಿಫ್ಟ್ ಡಿಸೈರ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಯಂಟಗಾನಹಳ್ಳಿ ಬಳಿ ನಡೆದಿದೆ.
ನೆಲಮಂಗಲದಲ್ಲಿ ಡಿವೈಡರ್ ಮೇಲಿಂದ ಹಾರಿದ ಕಾರ್ ಮತ್ತೊಂದು ಕಾರಿಗೆ ಡಿಕ್ಕಿ: ನಾಲ್ವರ ದುರ್ಮರಣ - nelamangala accident news
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಯಂಟಗಾನಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿದ್ದಾರೆ.
![ನೆಲಮಂಗಲದಲ್ಲಿ ಡಿವೈಡರ್ ಮೇಲಿಂದ ಹಾರಿದ ಕಾರ್ ಮತ್ತೊಂದು ಕಾರಿಗೆ ಡಿಕ್ಕಿ: ನಾಲ್ವರ ದುರ್ಮರಣ Accident between two cars: 4 dead near nelamangala](https://etvbharatimages.akamaized.net/etvbharat/prod-images/768-512-6393814-thumbnail-3x2-accidents.jpg)
ಡಿವೈಡರ್ನಿಂದ ಹಾರಿ ಮತ್ತೊಂದು ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ
ಡಿವೈಡರ್ನಿಂದ ಹಾರಿ ಮತ್ತೊಂದು ಕಾರಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ
ಘಟನೆಯಲ್ಲಿ ಕಾವೇರಮ್ಮ, ರಶ್ಮಿ, ಶಿವಕುಮಾರ್, ಕಿರಣ್ ಎಂಬುವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ನೆಲಮಂಗಲ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.