ನೆಲಮಂಗಲ:ಯೂ ಟರ್ನ್ ತೆಗೆದುಕೊಳ್ಳುವ ವೇಳೆ, ಲಾರಿಯೊಂದು ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಅಪಘಾತ: ಸ್ಥಳದಲ್ಲೇ ಲಾರಿ ಚಾಲಕ ಸಾವು - Nelamangala accident
ಬೆಂಗಳೂರಿನ ಹೊರವಲಯದ ನೆಲಮಂಗಲ ಬಳಿ ಲಾರಿಯೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದ್ದು, ಲಾರಿ ಚಾಲಕ ಸ್ಥಳದಲ್ಲೇ ಮೃತಟ್ಟಿದ್ದಾನೆ.
ಅಪಘಾತವಾದ ಸ್ಥಳ
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕೆಂಗಲ್ ಕೆಂಪೊಹಳ್ಳಿ ಗೇಟ್ ಬಳಿ ಈ ದುರ್ಘಟನೆ ನಡೆದಿದ್ದು, ಷಣ್ಮುಗಪ್ಪ ಸ್ಥಳದಲ್ಲೇ ಸಾವನ್ನಪ್ಪಿರುವ ಚಾಲಕ. ಕ್ಲೀನರ್ ಅಲ್ಲಾಭಕ್ಷ್ ಗೆ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಘಟನೆ ಬೆಳಗಿನ ಜಾವ ನಡೆದಿದ್ದು, ಸುಗುಣ ಪೌಲ್ಟ್ರೀ ಫಾರಂಗೆ ಲಾರಿಯಲ್ಲಿ ಮೇವು ಸಾಗಿಸುತ್ತಿದ್ದು, ಮೇವೆಲ್ಲಾ ರಸ್ತೆಯಲ್ಲಿ ಚಲ್ಲಾಪಿಲ್ಲಿಯಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನೆಲಮಂಗಲ ಸಬ್ ಇನ್ಸ್ ಪೆಕ್ಟರ್ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.