ಕರ್ನಾಟಕ

karnataka

ETV Bharat / state

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಭಸ್ಮ - ire to moving car in attibele,

10 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು, ಸುಟ್ಟು ಭಸ್ಮವಾದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮೇಲ್ಸೇತುವೆ ಮೇಲೆ ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಭಸ್ಮ

By

Published : Jul 28, 2019, 2:45 PM IST

ಆನೇಕಲ್​:10 ಮಂದಿ ಪ್ರಯಾಣಿಕರು ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು, ಸುಟ್ಟು ಭಸ್ಮವಾದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯ ಮೇಲ್ಸೇತುವೆ ಮೇಲೆ ನಡೆದಿದೆ.

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಕಾರು ಸಂಪೂರ್ಣ ಭಸ್ಮ

ಬೆಂಗಳೂರಿನ ಜೆಪಿ ನಗರ ನಿವಾಸಿ ಸೈಯದ್ ಎಂಬುವವರಿಗೆ ಸೇರಿದ KA-04-MB 6632 ಸ್ಕಾರ್ಪಿಯೋ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿದ್ದು, ಸುಟ್ಟು ಕರಕಲಾಗಿದೆ. ಸೈಯದ್ ಅವರ ಕುಟುಂಬದ ಒಟ್ಟು 10 ಮಂದಿ ಈ ಕಾರಿನಲ್ಲಿ ತಮಿಳುನಾಡಿನ ಹೊಸೂರಿನತ್ತ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದು, ಕ್ಷಣಾರ್ಧದಲ್ಲಿ 10 ಜನರು ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದರೊಳಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details