ದೇವನಹಳ್ಳಿ:ಚಿನ್ನದ ತಂತಿಗೆ ರೋಡಿಯಂ ಲೇಪಿಸಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಖದೀಮರಿಂದ 46.48 ಲಕ್ಷ ಮೌಲ್ಯದ 927.77 ಗ್ರಾಂ ಚಿನ್ನ ಜಪ್ತಿ ಮಾಡಿಕೊಳ್ಳಲಾಗಿದೆ.
27ರಂದು ಡಿಆರ್ಐ ಮಾಹಿತಿ ಮೇರೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಶಾರ್ಜಾದಿಂದ ಬಂದಿಳಿದ ಪ್ರಯಾಣಿಕ ಕಳ್ಳಸಾಗಾಣಿಕೆ ಕೃತ್ಯದಲ್ಲಿ ಸಿಕ್ಕಿಬಿದ್ದಿದ್ದಾನೆ.