ದೇವನಹಳ್ಳಿ: ಮೋದಿ ಸಮಾವೇಶಕ್ಕೆ ಅಧಿಕಾರಿಗಳಿಂದ ಹಣ ವಸೂಲಿ ಎಂಬ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪಕ್ಕೆ ಬಿಜೆಪಿ ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ ತಿರುಗೇಟು ನೀಡಿದ್ದಾರೆ.
ದೇವನಹಳ್ಳಿ ಪಟ್ಟಣದಲ್ಲಿ ಪಿಳ್ಳ ಮುನಿಶ್ಯಾಮಪ್ಪ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಅವರು ಅಧಿಕಾರಿಗಳಿಂದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವುದು ಸಾಬೀತು ಮಾಡಿದ್ದಲ್ಲಿ ನಾವು ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಸವಾಲು ಹಾಕಿದ್ದಾರೆ.