ಕರ್ನಾಟಕ

karnataka

ETV Bharat / state

ಶಾಂತಿಯುತವಾಗಿ ಉಪ ಚುನಾವಣೆ ನಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ - ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿಕೆ

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಚುನಾವಣಾ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.

ಶಾಂತಿಯುತವಾಗಿ ಉಪ ಚುನಾವಣೆ ನಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

By

Published : Nov 11, 2019, 8:46 PM IST

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಚುನಾವಣಾ ಅಭ್ಯರ್ಥಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹಾಗೂ ಸರ್ಕಾರಿ ಜಾಹೀರಾತಿಗೆ ಸಂಬಂಧಿಸಿದ ಎಲ್ಲಾ ಪೋಸ್ಟರ್ಸ್, ಬ್ಯಾನರ್ಸ್, ಫ್ಲೆಕ್ಸ್​ಗಳನ್ನು ಕೂಡಲೇ ತೆರವುಗೊಳಿಸಬೇಕು. ಚುನಾಯಿತ ಪ್ರತಿನಿಧಿಗಳಿಗೆ ನೀಡಿರುವ ಸರ್ಕಾರಿ ವಾಹನ ಹಾಗೂ ಆಪ್ತ ಸಹಾಯಕರನ್ನು ಹಿಂಪಡೆಯಬೇಕು. ಸರ್ಕಾರಿ ಪ್ರವಾಸಿ ಮಂದಿರ, ಪರಿವೀಕ್ಷಣಾ ಮಂದಿರಗಳನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಹಾಗೂ ಸರ್ಕಾರಿ ಸ್ವತ್ತು ಮತ್ತು ಸರ್ಕಾರಿ ಕಚೇರಿಗಳನ್ನು‌ ವಿರೂಪಗೊಳಿಸಿರುವುದನ್ನು ತೆರವುಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚುನಾವಣಾ ಮಾದರಿ ನೀತಿ ಸಂಹಿತೆಯು ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅನ್ವಯವಾಗದೆ ಜಿಲ್ಲಾದ್ಯಂತ ಜಾರಿಯಲ್ಲಿರುತ್ತದೆ. 1/1/2019 ರ ಅರ್ಹತಾ ದಿನಾಂಕದಂತೆ ಈಗಾಗಲೇ ಪ್ರಕಟಿಸಲಾಗಿರುವ ಮತದಾರರ ಪಟ್ಟಿಗಳ ಆಧಾರದ ಮೇಲೆ ಉಪ ಚುನಾವಣೆ ನಡೆಯಲಿದ್ದು, ಒಟ್ಟಾರೆ 2,12,748 ಮತದಾರರಿದ್ದು, ಅದರಲ್ಲಿ 107766 ಪುರುಷ ಮತದಾರರು,104956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ. ಮತದಾರರ ಪಟ್ಟಿ, ಮತಗಟ್ಟೆಗಳ ವ್ಯವಸ್ಥೆ, ಚುನಾವಣಾ ಅಕ್ರಮ ಸೇರಿದಂತೆ ಉಪ ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ, ದೂರವಾಣಿ ಸಂಖ್ಯೆ 1950ಕ್ಕೆ ಉಚಿತ ಕರೆ ಮಾಡುವ ಮೂಲಕ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ. ತಾಲೂಕಿನಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಭೌತಿಕ ಪರಿಶೀಲನೆ ಮತ್ತು ದೃಢೀಕರಣ ಪತ್ರ ಸಲ್ಲಿಸಬೇಕು, ಜಿಲ್ಲೆಯ 4 ತಾಲೂಕು ಕಚೇರಿಯಲ್ಲಿ 24/7 ನಿರ್ವಹಣಾ ಕೇಂದ್ರ ಸ್ಥಾಪಿಸಬೇಕೆಂದರಲ್ಲದೆ, ಹೊಸ ಎಂಇವಿಎಂ ಗಳ ಬಗ್ಗೆ ಸಾರ್ವಜನಿಕರಲ್ಲಿ ಮತ್ತು ಅಧಿಕಾರಿಗಳಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸಬೇಕು ಎಂದು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್ ಅವರು ಮಾತನಾಡಿ ಅಭ್ಯರ್ಥಿಗಳ ಚುನಾವಣಾ ವೆಚ್ಚಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸ್ ಇಲಾಖೆ ಮತ್ತು ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್​ಗಳಿಗೆ ಎಸ್‌ಎಸ್‌ಟಿ ತಂಡಗಳನ್ನು ನಿಯೋಜಿಸಲಾಗಿದೆ. 8 ಚೆಕ್‌ಪೋಸ್ಟ್​ಗಳನ್ನು ತೆರೆಯಲು ಸ್ಥಳಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಸ್ಥಾಪಿಸಲಾಗುವುದು ಎಂದರು. ಅಲ್ಲದೇ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ABOUT THE AUTHOR

...view details