ದೇವನಹಳ್ಳಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣೆ, ಎಪಿಎಂಸಿಯಂತಹ ತಿದ್ದುಪಡಿ ಕಾಯ್ದೆಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ಮಂಡ್ಯದಲ್ಲಿಂದು ರಾಜ್ಯಮಟ್ಟದ ಬೃಹತ್ ಸಮ್ಮೇಳನ ಆಯೋಜಿಸಿದೆ. ಈ ಸಮಾವೇಶದಲ್ಲಿ ಭಾಗವಹಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ಆಗಮಿಸಿದರು.
ರೈತ ಧ್ವನಿ ಕಾರ್ಯಕ್ರಮ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಬೆಂಗಳೂರಿಗೆ ಆಗಮನ - ರೈತ ಧ್ವನಿಕಾರ್ಯಕ್ರಮಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಬರಮಾಡಿಕೊಂಡರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಬೆಂಗಳೂರಿಗೆ ಆಗಮನ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡಿದ್ದು, ನಂತರ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯಕ್ಕೆ ತೆರಳಿದರು.