ದೇವನಹಳ್ಳಿ:ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕರನ್ನು ತಡೆದ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು 2 ಕೋಟಿ ರೂ. ಮೌಲ್ಯದ 3,311 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಡಿಸೆಂಬರ್ 23, 25, 29ರಂದು ಕೌಲಾಲಂಪುರ, ಜೆಡ್ಡಾ, ಶಾರ್ಜಾ ಮತ್ತು ಬ್ಯಾಂಕಾಕ್ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ವಿಮಾನಗಳಲ್ಲಿ ಬಂದಿಳಿದಿದ್ದ ಐವರು ಪುರುಷರು ಮತ್ತು 11 ಮಂದಿ ಮಹಿಳೆಯರನ್ನು ತಡೆದು ತಪಾಸಣೆ ನಡೆಸಿದಾಗ ಕಳ್ಳಸಾಗಣೆ ಬೆಳಕಿಗೆ ಬಂದಿದೆ.