ನೆಲಮಂಗಲ :ಖಾಸಗಿ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕಂಪನಿಗೆ ದಿಢೀರ್ ಭೇಟಿ ಪರಿಶೀಲನೆ ನಡೆಸಿದರು.
ಲೈಂಗಿಕ ದೌರ್ಜನ್ಯ ಆರೋಪ: ದಿಢೀರ್ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ
ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ಖಾಸಗಿ ಡ್ರಗ್ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಕಂಪೆನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆಲಮಂಗಲ
ಬೆಂಗಳೂರು ಹೊರವಲಯದ ನೆಲಮಂಗಲದ ಮಾಕಳಿ ಬಳಿಯ ಖಾಸಗಿ ಡ್ರಗ್ ಕಂಪನಿಯೊಂದರಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ಮಾತುಗಳಿಂದ ನಿಂದನೆ ಮಾಡಲಾಗುತ್ತಿದೆ ಎಂದು ಕಂಪೆನಿಯ ಇಬ್ಬರು ಸಂತ್ರಸ್ಥ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಕಂಪೆನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಮಗ್ರ ಮಾಹಿತಿ ಕಲೆ ಹಾಕಿದರು.