ಕರ್ನಾಟಕ

karnataka

ETV Bharat / state

ಕಾಯ್ದೆಗಳ ತಿದ್ದುಪಡಿ ಕೈಬಿಡಬೇಕು: ಆನೇಕಲ್​​ನಲ್ಲಿ ಕಾಂಗ್ರೆಸ್ ಪ್ರತಿಭಟನಾ ಜಾಥಾ

ಬಿಜೆಪಿ ಆಡಳಿತ ಬಂದಂದಿನಿಂದ ರೈತ, ಬಡವರ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸುತ್ತಲೇ ಇದೆ. ರಾಜ್ಯದ ಹಿತ ಕಾಪಾಡಬೇಕಾದ ಸಂಸದರು ಕೇಂದ್ರ ಸರ್ಕಾರದಲ್ಲಿ ಮೌನವಹಿಸಿದ್ದಾರೆ. ಇದು ಜನತೆಗೆ ಮಾರಕವಾಗಿ ಪರಿಣಮಿಸಿದೆ ಎಂದು ಆನೇಕಲ್, ಬೆಂಗಳೂರು ದಕ್ಷಿಣ - ಉತ್ತರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ದೂರಿದ್ದಾರೆ. ಅಲ್ಲದೇ ಈ ಸಂಬಂಧ ಇಂದು ಆನೇಕಲ್ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Amendment of acts should be abandoned: Congress protest in Anekal
ಕಾಯ್ದೆಗಳ ತಿದ್ದುಪಡಿ ಕೈಬಿಡಬೇಕು: ಆನೇಕಲ್ ನಲ್ಲಿ ಕಾಂಗ್ರೆಸ್ ಪ್ರತಿಭಟನಾ ಜಾಥಾ

By

Published : Aug 21, 2020, 10:33 AM IST

ಆನೇಕಲ್(ಬೆಂಗಳೂರು): ವಿವಿಧ ಕಾಯ್ದೆಗಳ ತಿದ್ದುಪಡಿ ಜನ ವಿರೋಧಿಯಾಗಿದ್ದು, ಇಂತಹ ಕಾರ್ಯವನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್​​ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕಾಯ್ದೆಗಳ ತಿದ್ದುಪಡಿ ಕೈಬಿಡಬೇಕು: ಆನೇಕಲ್ ನಲ್ಲಿ ಕಾಂಗ್ರೆಸ್ ಪ್ರತಿಭಟನಾ ಜಾಥಾ

ಬಿಜೆಪಿ ಆಡಳಿತಕ್ಕೆ ಬಂದಾಗಿನಿಂದ ರೈತರು, ಬಡವರ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸುತ್ತಲೇ ಇದೆ. ರಾಜ್ಯದ ಹಿತ ಕಾಪಾಡಬೇಕಾದ ಸಂಸದರು ಕೇಂದ್ರ ಸರ್ಕಾರದಲ್ಲಿ ಮೌನವಹಿಸಿದ್ದಾರೆ. ಇದು ಜನತೆಗೆ ಮಾರಕವಾಗಿ ಪರಿಣಮಿಸಿದೆ ಎಂದು ಆನೇಕಲ್, ಬೆಂಗಳೂರು ದಕ್ಷಿಣ - ಉತ್ತರ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು ದೂರಿದ್ದಾರೆ. ಅಲ್ಲದೇ ಈ ಸಂಬಂಧ ಇಂದು ಆನೇಕಲ್ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಹೊಸ ಶೈಕ್ಷಣಿಕ ನೀತಿ, ಭೂ ಸುಧಾರಣಾ ಕಾಯಿದೆ, ಇತ್ತೀಚೆಗೆ ಕೊರೊನಾದ ನೆಪದಲ್ಲಿ ಭ್ರಷ್ಟಾಚಾರದಲ್ಲೂ ಸರ್ವಾಧಿಕಾರಿ ಧೋರಣೆ ಮೆರೆಯುತ್ತಿರುವ ಸರ್ಕಾರದ ನಿಯಮಗಳು ಜನರನ್ನು ಬಾಧಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ, ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರವನ್ನು ರವಾನಿಸಿದ ಕಾಂಗ್ರೆಸ್ ಮುಖಂಡರು ಬಿಜೆಪಿ ಜನಪ್ರತಿನಿಧಿಗಳ ವಿರುದ್ದ ವಾಗ್ದಾಳಿ ನಡೆಸಿದರು.

ABOUT THE AUTHOR

...view details