ಕರ್ನಾಟಕ

karnataka

ETV Bharat / state

ಮೇ 29ರಂದು ಆನೇಕಲ್ ಪುರಸಭಾ ಚುನಾವಣೆ - undefined

ಆನೇಕಲ್ ಪುರಸಭಾ ಚುನಾವಣೆ ಹಾಗೂ ಹೆಬ್ಬಗೋಡಿ ನಗರ ಸಭೆಯ ವಾರ್ಡ್ ಸಂಖ್ಯೆ 26ರ ಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ.

ಚುನಾವಣೆ

By

Published : May 10, 2019, 10:29 PM IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪುರಸಭೆಗೆ ಮೇ 29 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಹೆಬ್ಬಗೋಡಿ ನಗರ ಸಭೆಯ ವಾರ್ಡ್ ಸಂಖ್ಯೆ 26ರ ಸ್ಥಾನಕ್ಕೂ ಚುನಾವಣೆ ನಡೆಯಲಿದೆ.

ಚುನಾವಣಾ ವೇಳಾಪಟ್ಟಿ:

ಎಲ್ಲಾ ಕಾರ್ಯ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮ ಪತ್ರಗಳನ್ನು ಸಲ್ಲಿಸಬಹುದಾಗಿದೆ. ಅಂತೆಯೇ, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ. ಮೇ 17ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 20ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಅಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ.

ಮತದಾನ ಅವಶ್ಯವಿದ್ದಲ್ಲಿ, ಮೇ 29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಮೇ 30ರಂದು ನಡೆಸಲಾಗುವುದು. ಮೇ 31ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯ್ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details