ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಗೆ ಕಂದಾಯ ಸಚಿವ ಆರ್ ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕಾರದ್ಲಾಂಜೆ ಸ್ವಾಗತಿಸಿದರು.
ಬೆಂಗಳೂರಿಗೆ ರಾಜ್ಯ ಉಸ್ತುವಾರಿ ಅರುಣ್.. ಸಂಪುಟ ಸರ್ಜರಿ, ಗ್ರಾಪಂ ಚುನಾವಣೆ ಬಗ್ಗೆ ಚರ್ಚೆ - Volume expansion
ದೇವನಹಳ್ಳಿ, ಬೆಂಗಳೂರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಗ್ರಾಪಂ ಚುನಾವಣೆಗೆ ಸಂಬಂಧಿಸದಂತೆ ಚರ್ಚಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಅಗಮಿಸಿದ್ದಾರೆ..
ರಾಜ್ಯ ರಾಜಧಾನಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಅರುಣ್ ಸಿಂಗ್ ಆಗಮಿಸಿದ್ದಾರೆ. ಮುಂಬರುವ ಗ್ರಾಮ ಪಂಚಾಯತ್, ಬಿಬಿಎಂಪಿ ಚುನಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನ ವಿಸ್ತರಣೆ, ಪುನಾರಚನೆಯ ಬಿಕ್ಕಟ್ಟು ತಲೆದೋರಿದೆ. ಜತೆಗೆ ಈ ಬಗ್ಗೆ ಭಿನ್ನಮತವೂ ಸ್ಫೋಟಗೊಂಡಿದೆ. ಮೂಲ ಬಿಜೆಪಿಗರ ಕಡೆಗಣನೆ ಸೇರಿದಂತೆ ಇತ್ತೀಚಿನ ಪಕ್ಷದಲ್ಲಿನ ಬೆಳವಣಿಗೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಯಡಿಯೂರಪ್ಪ ಸೇರಿ ಹಲವು ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ.