ದೇವನಹಳ್ಳಿ :2023ರ ಚುನಾವಣೆಯಲ್ಲಿ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ ವೈ ರಾಘವೇಂದ್ರ ಸ್ವಾಗತಿಸಿದರು. ಈ ವೇಳೆ ಏರ್ಪೋರ್ಟ್ನಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಜೈಕಾರ ಹಾಕುವ ಮೂಲಕ ಅರುಣ್ ಸಿಂಗ್ ಅವರಿಗೆ ಸ್ವಾಗತ ಕೋರಿದರು.
ಬೆಂಗಳೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನಮ್ಮ ಗುರಿ. ಹೀಗಾಗಿ, ರಾಜ್ಯದ ಪ್ರತಿಯೊಂದು ಜಿಲ್ಲೆಗೂ ಭೇಟಿ ನೀಡಿ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಸಂವಾದ ನಡೆಸಲಾಗುವುದು. ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಮೊದಲ ಹಂತವಾಗಿ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದೇವೆ. ನಂತರ ಹಂತ ಹಂತವಾಗಿ ರಾಜ್ಯಾದ್ಯಂತ ಪ್ರವಾಸ ಮಾಡ್ತೇವೆ ಎಂದರು. ಖಾಲಿ ಉಳಿದ ಸಚಿವ ಸ್ಥಾನಗಳನ್ನ ತುಂಬುವ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಹೈಕಮಾಂಡ್ ಜತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಓದಿ:COVID: 2ನೇ ಅಲೆಯಲ್ಲಿ ಮೊದಲ ಬಾರಿಗೆ ಗಣನೀಯ ಇಳಿಕೆ ಕಂಡ ಸೋಂಕಿತರ ಸಂಖ್ಯೆ