ದೇವನಹಳ್ಳಿ:ಕಳೆದೊಂದು ವಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದ್ವಿಗುಣಗೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕರು ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಓದಿ: ಮರಾಠಿ ಪುಂಡರಿಗೆ ಸವಾಲೆಸೆದ ಕರವೇ.. ಬೆಂಗಳೂರಿನಿಂದ-ಬೆಳಗಾವಿಗೆ 'ಸ್ವಾಭಿಮಾನಿ ಕನ್ನಡಿಗರ ಜಾಥಾ'
ಜಿಲ್ಲೆಯ ಜನತೆ ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳನ್ನು ನಡೆಸುವ ಹಾಗೂ ಭಾಗವಹಿಸುವ ಸಂದರ್ಭ ಸರ್ಕಾರ ನಿಗದಿಪಡಿಸಿರುವ ಕೋವಿಡ್-19ರ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು, 500ಕ್ಕೂ ಹೆಚ್ಚು ಜನ ಸೇರದಂತೆ ಕಾರ್ಯಕ್ರಮ ನಡೆಸಬೇಕು.
2021ರ ಮಾರ್ಚ್ 17ರಂದು ಬೆಳಗ್ಗೆ 10 ಗಂಟೆಯಿಂದ 11.30 ಗಂಟೆಯವರೆಗೆ ವಿಶೇಷವಾಗಿ ಜಿಲ್ಲೆಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಹಾಗೂ ಮಾಜಿ ಸದಸ್ಯರಿಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಆಸ್ಪತ್ರೆಗಳಲ್ಲಿ ಕೋವಿಡ್-19 ಲಸಿಕೆ ನೀಡಲಾಗುವುದು.
60 ವರ್ಷ ಮೇಲ್ಪಟ್ಟ ವಯೋವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟು ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವವರು ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ನಾವು ಸುರಕ್ಷಿತವಾಗಿ ಇರಲು ಲಸಿಕೆ ಹಾಕಿಸಿಕೊಳ್ಳಬೇಕೆಂದು ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಹೊರದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ನಿಂದ ಬರುವ ಮತ್ತು ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವ ಪ್ರಯಾಣಿಕರನ್ನ ತಪಾಸಣೆ ನಡೆಸಿ ಹೊರಗೆ ಬಿಡಲಾಗುತ್ತಿದೆ ಎಂದು ಹೇಳಿದರು.