ಕರ್ನಾಟಕ

karnataka

By

Published : Oct 20, 2022, 1:56 PM IST

ETV Bharat / state

ಹೊಸಕೋಟೆ ಕಾಂಗ್ರೆಸ್​​ನಲ್ಲಿ ಬಿರುಕು: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುನಿ ಶಾಮಣ್ಣ‌

ಪದಾಧಿಕಾರಿಗಳ ಆಯ್ಕೆಯಲ್ಲಿ ಮೂಲ ಕಾಂಗ್ರೆಸ್ಸಿಗರ ನಿರ್ಲಕ್ಷ್ಯ ಮಾಡಿದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚೀಮಂಡ ಹಳ್ಳಿ ಮುನಿಶಾಮಣ್ಣ ರಾಜೀನಾಮೆ ನೀಡಿದ್ದಾರೆ.

Kn Bng 01 Hos
ಮುನಿಶಾಮಣ್ಣ

ಹೊಸಕೋಟೆ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೊಸಕೋಟೆ ಕಾಂಗ್ರೆಸ್​​ನಲ್ಲಿ ಮೂಲ ಮತ್ತು ವಲಸಿಗರ ನಡುವೆ ಭಿನ್ನಾಭಿಪ್ರಾಯಗಳು ಸ್ಫೋಟಗೊಂಡು ರಾಜೀನಾಮೆವರೆಗೆ ಬಂದು ನಿಂತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭೆ ಚುನಾವಣೆಯಲ್ಲಿ ರಾಜಕೀಯ ಜೋರಾಗುತ್ತಿದೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚೀಮಂಡ ಹಳ್ಳಿ ಮುನಿಶಾಮಣ್ಣ ರಾಜೀನಾಮೆ ನೀಡಿದ್ದಾರೆ. ಶರತ್ ಬಚ್ಚೇಗೌಡ ವಿರುದ್ಧ ಸಿಡಿದೆದ್ದ ಮುನಿಶಾಮಣ್ಣ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಶಾಕ್ ನೀಡಿದ್ದಾರೆ. ಪದಾಧಿಕಾರಿಗಳ ಆಯ್ಕೆಯಲ್ಲಿ ಮೂಲ ಕಾಂಗ್ರೆಸ್ಸಿಗರ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲಾಗಿದೆ.

ಶರತ್ ಬಚ್ಚೇಗೌಡರು ಶಾಸಕರಾದ ಮೇಲೆ ಮೂಲ ಕಾಂಗ್ರೆಸಿಗರನ್ನ ಕಡೆಗಣಿಸಲಾಗುತ್ತಿದೆ ಎಂಬ ಆರೋಪ ಕಳೆದ ಎರಡು ವರ್ಷದಿಂದ ಕೇಳಿ ಬರುತ್ತಿತ್ತು. ಈ ವಿಷಯವನ್ನ ಮಾಜಿ ಸಿಎಂ ಸಿದ್ದರಾಮಯ್ಯ ಗಮನಕ್ಕೂ ಮೂಲ ಕಾಂಗ್ರೆಸಿಗರು ತಂದಿದ್ದರು. ಪದಾಧಿಕಾರಿಗಳ ಆಯ್ಕೆಯಲ್ಲಿ ಶರತ್ ಬಚ್ಚೇಗೌಡ ಅವರು ಮೂಲ ಕಾಂಗ್ರೆಸ್ಸಿಗರನ್ನು ನಿರ್ಲಕ್ಷ್ಯ ಮಾಡಿ ತಮ್ಮ ಬೆಂಬಲಿಗರಿಗೆ ಆದ್ಯತೆ ನೀಡಿದ್ದಾರೆ ಎಂದು ಆರೋಪಗಳು ಮಾಡಲಾಗಿತ್ತು.

ಕಳೆದ ಹೊಸಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಸಾರಿ ಪಕ್ಷೇತರ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಕಣಕ್ಕಿಳಿದು ಗೆಲುವು ಸಾಧಿಸಿದ್ದರು. ಬಳಿಕ ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದಲೇ ಸ್ಪರ್ಧೆ ಮಾಡುತ್ತಿದ್ದು, ಅಷ್ಟರಲ್ಲೇ ಮೂಲ ಕಾಂಗ್ರೆಸಿಗರ ಕೆಂಗಣ್ಣಿಗೆ ಗುರಿಯಾಗಿದ್ದು. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದಿದ್ದವರನ್ನ ಮೂಲೆಗುಂಪು ಮಾಡಿ, ಈಗ ಬಂದವರಿಗೆ ಮಣೆ ಹಾಕುತ್ತಿದ್ದಾರೆ ಎಂದು ಮೂಲ ಕಾಂಗ್ರೆಸ್​​ನವರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ:ಸಚಿವ ಸಂಪುಟ ಸಭೆ: ಎಸ್ಸಿ, ಎಸ್ಟಿ ಮೀಸಲು ಹೆಚ್ಚಳದ ಸುಗ್ರೀವಾಜ್ಞೆಗೆ ಅಸ್ತು ಸಾಧ್ಯತೆ

ABOUT THE AUTHOR

...view details