ಕರ್ನಾಟಕ

karnataka

By

Published : Nov 6, 2019, 8:34 PM IST

ETV Bharat / state

ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಗಮನಹರಿಸಿ: ಅಧಿಕಾರಿಗಳಿಗೆ ಬೆಂ.ಗ್ರಾ ಜಿ.ಪಂ ಅಧ್ಯಕ್ಷೆ ಸೂಚನೆ

ಇತ್ತೀಚೆಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾದ ಬಗ್ಗೆ ಜಿಲ್ಲಾ ಪಂಚಾಯಿತಿ ಸದಸ್ಯರು ಸಭೆಯಲ್ಲಿ‌ ಪ್ರಸ್ತಾಪಿಸಿದ ಹಿನ್ನಲೆ, ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಗಮನಹರಿಸಬೇಕೆಂದು ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜಯಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್​ ಸಾಮಾನ್ಯ ಸಭೆ ನಡೆಯಿತು

ಬೆಂಗಳೂರು: ಹೊಸಕೋಟೆ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾದ ಬಗ್ಗೆ ಜಿಲ್ಲಾ ಪಂಚಾಯತ್​ ಸದಸ್ಯರು ಸಭೆಯಲ್ಲಿ‌ ಪ್ರಸ್ತಾಪಿಸಿದ ಹಿನ್ನಲೆ, ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಗಮನಹರಿಸಬೇಕೆಂದು ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಜಯಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್​ ಕಚೇರಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಕೊರತೆಯನ್ನು ಪರಿಹರಿಸಿ ಅವಶ್ಯಕವಾದ ಔಷಧಿಗಳನ್ನು ಸೂಕ್ತ ಸಮಯಕ್ಕೆ ಒದಗಿಸಲಾಗುವುದು. ಕಡಿಮೆ ಜನಸಂದಣಿ ಹೊಂದಿರುವ ಅರದೇಶನಹಳ್ಳಿಯ ಹೆರಿಗೆ ಆಸ್ವತ್ರೆಯನ್ನು ಹೆಚ್ಚು ಜನರಿರುವ ಬೂದಿಗೆರೆ ಗ್ರಾಮಕ್ಕೆ ಶೀಘ್ರವಾಗಿ ವರ್ಗಾಯಿಸಲಾಗುವುದು. ಮಧುಮೇಹ, ಹಾವು ಕಡಿತ ಮತ್ತು ನಾಯಿ ಕಡಿತದಂತಹ ಸಮಸ್ಯೆಗೆ ಸೂಕ್ತ ಔಷಧಿಗಳನ್ನು ಪೂರೈಸಲಾಗುವುದು ಎಂದರು.

ಸರ್ಕಾರಿ ಶಾಲೆಗಳ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸಧೃಡರಾಗಲು ಕ್ರೀಡಾ ಸಾಮಗ್ರಿಗಳನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಮರ್ಪಕವಾಗಿ ಪೂರೈಸಬೇಕು, ಶಾಲೆಗಳ ದುರಸ್ತಿ ಕಾರ್ಯ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಹಾಗೂ ರೈತರ ಧಾನ್ಯಗಳ ಸಂರಕ್ಷಣೆಗೆ ರಾಸಾಯಿನಿಕ ಔಷಧಿಗಳನ್ನು ಬಳಸದೇ ಸಂರಕ್ಷಿಸುವ ಅವಕಾಶವನ್ನು ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ.ಬಿ, ಯೋಜನಾ ನಿರ್ದೇಶಕ ಡಾ.ಕೆ.ಹೆಚ್.ಶಿವರುದ್ರಪ್ಪ ಸೇರಿದಂತೆ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಜಿ.ಪಂ. ಸದಸ್ಯರುಗಳು, ತಾಲೂಕು ಪಂಚಾಯತ್​ ಅಧ್ಯಕ್ಷರುಗಳು, ತಾಲೂಕು ಕಾರ್ಯ ನಿರ್ವಾಹಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details